ಅಜ್ಮೀರ್ ಹೋಟೆಲ್‌ನಲ್ಲಿ ಅಗ್ನಿ ಅವಘಡ – ಮಗುವನ್ನು ರಕ್ಷಿಸಲು 3ನೇ ಮಹಡಿಯಿಂದ ಎಸೆದ ತಾಯಿ

Public TV
1 Min Read
4 Dead In Ajmer Hotel Fire Woman Throws Her Child From 3rd Floor Window
  • ನಾಲ್ವರು ಸಾವು, 8 ಮಂದಿಗೆ ಗಾಯ – ರಕ್ಷಣಾ ಕಾರ್ಯಾಚರಣೆ ವೇಳೆ ಮೂರ್ಛೆ ಹೋದ ಪೊಲೀಸರು!

ಜೈಪುರ್‌: ಅಜ್ಮೀರ್‌ನ ಹೋಟೆಲ್ ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡದ ವೇಳೆ ಮಹಿಳೆಯೊಬ್ಬರು ತಮ್ಮ ಮಗುವನ್ನು ರಕ್ಷಿಸಲು 3ನೇ ಮಹಡಿಯಿಂದ ಎಸೆದಿದ್ದಾರೆ. ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ಹಲವರು ಗಾಯಗೊಂಡಿದ್ದಾರೆ. ಬೆಂಕಿಯಿಂದ ತಪ್ಪಿಸಿಕೊಳ್ಳಲು ಜನ ಒಟ್ಟಾಗಿ ಓಡಿದ್ದರಿಂದ ನೂಕುನುಗ್ಗಲು ಸಂಭವಿಸಿತ್ತು. ಹೋಟೆಲ್‌ ಕಿರಿದಾದ ಓಣಿಯಲ್ಲಿದ್ದು, ಸಿಲುಕಿರುವ ಜನರನ್ನು ರಕ್ಷಿಸಲು ಪ್ರಯತ್ನಿಸುವಾಗ ಅನೇಕ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಮೂರ್ಛೆ ಹೋಗಿದ್ದರು ಎಂದು ವರದಿಯಾಗಿದೆ. ಇದನ್ನೂ ಓದಿ: ರಾಜ್ಯ ಸರ್ಕಾರಗಳಿಗೆ ಜಾತಿ ಜನಗಣತಿ ಮಾಡುವ ಅಧಿಕಾರ ಇಲ್ಲ: ವಿಜಯೇಂದ್ರ

ಅವಘಡದಲ್ಲಿ ಎಂಟು ಜನ ಗಾಯಗೊಂಡಿದ್ದಾರೆ. ಅವರನ್ನು ಜೆಎಲ್‌ಎನ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಈಗ ಮುಗಿದಿದೆ. ಬೆಂಕಿಯನ್ನು ನಂದಿಸಲಾಗಿದೆ ಎಂದು ನಗರ ಎಡಿಎಂ ಗಜೇಂದ್ರ ಸಿಂಗ್ ರಾಥೋಡ್ ದೃಢಪಡಿಸಿದ್ದಾರೆ. ಇನ್ನೂ, ವಿದ್ಯುತ್ ಫಲಕದಿಂದ ಬೆಂಕಿ ಹೊತ್ತಿಕೊಂಡಿತು. ಅದು ಸ್ವಲ್ಪ ಸಮಯದಲ್ಲೇ ಭಾರೀ ಅಗ್ನಿ ಅವಘಡಕ್ಕೆ ಕಾರಣವಾಯಿತು ಎಂದು ಹೋಟೆಲ್ ವ್ಯವಸ್ಥಾಪಕರು ಹೇಳಿದ್ದಾರೆ. ಇದನ್ನೂ ಓದಿ:‌ ಅಫ್ಘಾನ್‍ನಿಂದ ಭಾರತಕ್ಕೆ ಸರಕು ಸಾಗಾಟ – ಪಾಕ್‍ನಿಂದ ಅನುಮತಿ

Share This Article