ಕೋಲ್ಕತ್ತಾ: ಮಂಗಳವಾರ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ (Eden Gardens Stadium) ನಡೆದ ಪಾಕಿಸ್ತಾನ-ಬಾಂಗ್ಲಾದೇಶ ವಿಶ್ವಕಪ್ (World Cup) ಕ್ರಿಕೆಟ್ ಪಂದ್ಯದ ವೇಳೆ ಪ್ಯಾಲೆಸ್ತೀನ್ (Palestinian) ಧ್ವಜ (Flag) ಹಾರಿಸಿದ ನಾಲ್ವರು ಯುವಕರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಶಕ್ಕೆ ಪಡೆದವರಲ್ಲಿ ಇಬ್ಬರು ಜಾರ್ಖಂಡ್‌ನ ನಿವಾಸಿಗಳಾಗಿದ್ದು, ಇನ್ನಿಬ್ಬರು ಕೋಲ್ಕತ್ತಾದ ಎಕ್ಬಾಲ್‌ಪೋರ್ ಮತ್ತು ನೆರೆಯ ಹೌರಾದಿಂದ ಬಂದವರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಬ್ಬರನ್ನು ಗೇಟ್ ಸಂಖ್ಯೆ 6ರ ಬಳಿ ಪ್ಯಾಲೆಸ್ತೀನ್ ಧ್ವಜ ಹಾರಿಸಿದ್ದಕ್ಕಾಗಿ ವಶಕ್ಕೆ ಪಡೆದಿದ್ದು, ಮತ್ತಿಬ್ಬರನ್ನು ಬ್ಲಾಕ್ ಜಿ1 ನಲ್ಲಿ ವಶಕ್ಕೆ ಪಡೆಯಲಾಗಿದೆ. ನಾವು ಅವರ ಉದ್ದೇಶವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದೇವೆ ಎಂದು ಐಪಿಎಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಮತ್ತೆ 100 ರೂ. ಏರಿಕೆ!
ಮೈದಾನ ಪೊಲೀಸ್ ಠಾಣೆಯಿಂದ ನಾಲ್ವರನ್ನು ಕಾನೂನು ಪರಿಪಾಲಕರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಮೊದಲಿಗೆ ಅಲ್ಲಿ ಪೋಸ್ಟಿಂಗ್ ಮಾಡಿದ ಪೊಲೀಸರಿಗೆ ಪ್ರತಿಭಟನಾಕಾರರು ಏನು ಮಾಡುತ್ತಿದ್ದಾರೆ ಎಂದು ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ನಂತರ ಅವರು ಪ್ಯಾಲೆಸ್ತೀನ್ ಧ್ವಜವನ್ನು ಹಾರಿಸುತ್ತಿರುವುದನ್ನು ಗಮನಿಸಿದ ಬಳಿಕ ಅವರನ್ನು ವಶಕ್ಕೆ ಪಡೆಯಲಾಯಿತು. ಆದರೆ ಅವರು ಯಾವುದೇ ಘೋಷಣೆಯನ್ನು ಕೂಗಲಿಲ್ಲ ಎಂದು ಐಪಿಎಸ್ ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿಗೆ ಕೇಜ್ರಿವಾಲ್ ಕಂಡರೆ ಭಯ, ಶ್ರೀಘ್ರವೇ ಬಂಧನ ಸಾಧ್ಯತೆ – ಸಚಿವೆ ಅತಿಶಿ
ಆರಂಭಿಕ ತನಿಖೆಯಲ್ಲಿ ಇಪ್ಪತ್ತು ವಯಸ್ಸಿನ ನಾಲ್ವರು ಯುವಕರು ಗಾಜಾದಲ್ಲಿ ನಡೆಯುತ್ತಿರುವ ಇಸ್ರೇಲ್-ಹಮಾಸ್ ಸಂಘರ್ಷವನ್ನು ಪ್ರತಿಭಟಿಸುತ್ತಿದ್ದು, ಜನರಲ್ಲಿ ಸಂಚಲನ ಮೂಡಿಸುವ ಸಲುವಾಗಿ ಅಂತರ್‌ರಾಷ್ಟ್ರೀಯ ಪಂದ್ಯವನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಕೋಲ್ಕತ್ತಾ ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಯಾರ ಪ್ರಭಾವಕ್ಕೂ ಒಳಗಾಗದಿದ್ರೆ ಫೋನ್ ಹ್ಯಾಕಿಂಗ್ ಪ್ರಯತ್ನ ಯಾಕೆ? – ಯಾವುದಕ್ಕೂ ಹೆದರಲ್ಲ: ರಾಗಾ ತಿರುಗೇಟು
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]