ಚಂಡೀಗಢ: ಮೂರು ಅಂತಸ್ತಿನ ರೈಸ್ ಮಿಲ್ (Rice Mill) ಕಟ್ಟಡ ಕುಸಿದು (Collapse) ನಾಲ್ವರು ಸಾವನ್ನಪ್ಪಿ, 20 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಹರಿಯಾಣದ (Haryana) ಕರ್ನಾಲ್‌ನಲ್ಲಿ ನಡೆದಿದೆ.
ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ಕಟ್ಟಡ ಕುಸಿದ ಸಂದರ್ಭದಲ್ಲಿ ಕಟ್ಟಡದೊಳಗೆ ಸುಮಾರು 150 ಜನ ಕಾರ್ಮಿಕರಿದ್ದರು ಎಂದು ವರದಿಗಳು ತಿಳಿಸಿವೆ. ಕಟ್ಟಡ ಕುಸಿದ ವೇಳೆ 24 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದರು. ತಕ್ಷಣವೇ ಅಗ್ನಿಶಾಮಕ ದಳ (Fire Brigade), ಪೊಲೀಸ್ ಹಾಗೂ ಆಂಬುಲೆನ್ಸ್ ಸ್ಥಳಕ್ಕೆ ಧಾವಿಸಿದ್ದು, ಕಾರ್ಯಾಚರಣೆ ನಡೆಸಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದವರನ್ನು ಹೊರತೆಗೆದಿದ್ದಾರೆ. ಈ ವೇಳೆ ನಾಲ್ವರು ಮೃತಪಟ್ಟಿದ್ದು, ಉಳಿದ 20 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಅಕ್ರಮ ಮರಳು ಗಣಿಗಾರಿಕೆ ತಡೆಯಲು ಬಂದಿದ್ದ ಅಧಿಕಾರಿಗಳ ಮೇಲೆ ಕಲ್ಲು, ದೊಣ್ಣೆಯಿಂದ ಹಲ್ಲೆ
Advertisement
Advertisement
ರಕ್ಷಣಾ ಕಾರ್ಯಾಚರಣೆಗಳು ಮುಂದುವರೆದಿದ್ದು, ಘಟನೆ ಕುರಿತು ತನಿಖೆ ನಡೆಸಲು ಸಮಿತಿ ರಚಿಸಲಾಗುವುದು. ಅಲ್ಲದೇ ರೈಸ್ ಮಿಲ್ ಮಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಅನೀಶ್ ಯಾದವ್ ತಿಳಿಸಿದ್ದಾರೆ. ಇದನ್ನೂ ಓದಿ: BWSSB ಅರೆಬರೆ ಕಾಮಗಾರಿ – ಗುಂಡಿಗೆ ಬಿದ್ದ ಬಾಲಕ ಬಲಿ
Advertisement