ಗುವಾಹಟಿ: ನಿರ್ಮಾಣ ಹಂತದಲ್ಲಿದ್ದ ಮೋರಿಗೆ (Culvert) ಕಾರೊಂದು ಬಿದ್ದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಅಸ್ಸಾಂನ (Assam) ತಿನ್ಸುಕಿಯಾದಲ್ಲಿ ನಡೆದಿದೆ.
ಒಂದೇ ಕುಟುಂಬದ ಆರು ಮಂದಿ ಬಿಹಾರದಿಂದ ಮದುವೆಗೆಂದು ತಿನ್ಸುಕಿಯಾಗೆ (Tinsukia) ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮಂಗಳವಾರ ಮುಂಜಾನೆ 4 ಗಂಟೆಯ ವೇಳೆಗೆ ಘಟನೆ ಸಂಭವಿಸಿದೆ. ತಿನ್ಸುಕಿಯಾ-ದಿಬ್ರುಗಢ್ ಮಾರ್ಗದ ದಿಹಿಂಗಿಯಾ ಗಾಂವ್‌ನ ಬೈಪಾಸ್‌ನಲ್ಲಿ ಅಪಘಾತ ಸಂಭವಿಸಿದೆ. ದಿಬ್ರುಗಢದಿಂದ ತಿನ್ಸುಕಿಯಾಗೆ ಪ್ರಯಾಣಿಸುತ್ತಿದ್ದ ಕಾರು ಇದ್ದಕ್ಕಿದ್ದಂತೆ ನಿರ್ಮಾಣ ಹಂತದಲ್ಲಿರುವ ಮೋರಿಗೆ ಬಿದ್ದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಲಾಬಿ ಎಟಿಎಂ ಮಷಿನ್‌ನಲ್ಲಿ ಹಣ ಹಾಕಲು ಬಂದು 39,500 ರೂ. ಕಳೆದುಕೊಂಡ ವ್ಯಕ್ತಿ
ಕಾರಿನಲ್ಲಿ ಐದು ವರ್ಷದ ಮಗು ಸೇರಿದಂತೆ ಒಟ್ಟು ಆರು ಮಂದಿ ಪ್ರಯಾಣಿಕರಿದ್ದರು. ಘಟನೆಯಲ್ಲಿ ಮಗು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಮೃತರನ್ನು ಮೋಹನ್ ಶಾ, ರಾಜೇಶ್ ಗುಪ್ತಾ, ಮೊಂಟು ಶಾ ಮತ್ತು ಮಗು ಅರ್ಥವ್ ಗುಪ್ತಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಇಬ್ಬರನ್ನು ಚಿಕಿತ್ಸೆಗಾಗಿ ದಿಬ್ರುಗಢ್‌ನಲ್ಲಿರುವ ಅಸ್ಸಾಂ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಅಭಿವೃದ್ಧಿಗೆ ಬ್ರೇಕ್ ಹಾಕುವಲ್ಲಿ ಕಾಂಗ್ರೆಸ್, ಮಿತ್ರಪಕ್ಷಗಳಿಂದ ಪಿಹೆಚ್‌ಡಿ: ಮೋದಿ ವಾಗ್ದಾಳಿ
ದಟ್ಟವಾದ ಮಂಜು ಮತ್ತು ಸರಿಯಾದ ಸೂಚನಾ ಫಲಕಗಳಿಲ್ಲದ ಕಾರಣ ಈ ಘಟನೆ ಸಂಭವಿಸಿರಬಹುದು. ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ತಲುಪಿಸಲು ನೆರವಾಗಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: Kalaburagi| ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ