ಚಾಮರಾಜನಗರ: ಕಾರನ್ನು ಅಡ್ಡಗಟ್ಟಿ ಕಾರಿನಲ್ಲಿದ್ದವರನ್ನು ಸುಲಿಗೆ ಮಾಡಿ ಪರಾರಿಯಾಗಿದ್ದ ನಾಲ್ವರು ಖತರ್ನಾಕ್ ದರೋಡೆಕೋರರ ಗುಂಪನ್ನು ಹಡೆಮುರಿಕಟ್ಟುವಲ್ಲಿ ಕೊಳ್ಳೇಗಾಲ ಗ್ರಾಮಾಂತರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೆಂಗಳೂರಿನ ಭರತ್ ಅಲಿಯಾಸ್ ಹುಳಿಮಾವು, ಹನುಮೇಗೌಡ, ಕಿರಣ್, ಪ್ರತಾಪ್ ಬಂಧಿತ ಆರೋಪಿಗಳಾಗಿದ್ದಾರೆ. ಕಾರನ್ನು ಅಡ್ಡಗಟ್ಟಿ ಕಾರಿನಲ್ಲಿದ್ದವರ ಹಣ ಮತ್ತು ಮೊಬೈಲ್ ದೋಚಿದ್ದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು ಆರೋಪಿಗಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಮೆಲಾನಿಯಾ ಟ್ರಂಪ್, ಕೇಜ್ರಿವಾಲ್ ಶಾಲೆಯನ್ನು ಮಾತ್ರ ನೋಡಬೇಕೆಂದಿದ್ದರು: ದೆಹಲಿ ಸಿಎಂ
Advertisement
Advertisement
Advertisement
ಕಳೆದ ತಿಂಗಳಷ್ಟೆ ತಮಿಳುನಾಡು ಮೂಲದ ಶಿವು ಹಾಗೂ ಸ್ನೇಹಿತ ದಿನೇಶ್, ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದರು. ಈ ವೇಳೆ ಮಧುವನಹಳ್ಳಿಯ ಮುಖ್ಯ ರಸ್ತೆಯ ಬಳಿ ಕಾರಿನಲ್ಲಿ ಬಂದ ಆರೋಪಿಗಳು ಶಿವು ಹಾಗೂ ದಿನೇಶ್ ಬರುತ್ತಿದ್ದ ಕಾರನ್ನು ಅಡ್ಡಗಟ್ಟಿ ಹಣ ಹಾಗೂ ಮೊಬೈಲ್ ದೋಚಿ ಪರಾರಿಯಾಗಿದ್ದರು.
Advertisement
ಬಳಿಕ ಶಿವು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆ ಡಿವೈಎಸ್ಪಿ ಜಿ.ನಾಗರಾಜು ಮಾರ್ಗದರ್ಶನದಲ್ಲಿ ಎರಡು ಪ್ರತ್ಯೇಕ ತಂಡಗಳ ಮೂಲಕ ಕಾರ್ಯಾಚರಣೆಗಿಳಿದಿದ್ದರು. ಇದನ್ನೂ ಓದಿ: ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಕಹಳೆ – ರಷ್ಯಾ ಮೇಲೆ ಹಣಕಾಸು ಸೇರಿ ವಿವಿಧ ನಿರ್ಬಂಧ ಹೇರಿದ ಅಮೆರಿಕ!
ತಿಂಗಳುಗಳ ಕಾಲ ನಡೆದ ಕಾರ್ಯಾಚರಣೆಯಲ್ಲಿ ಖತರ್ನಾಕ್ ನಾಲ್ವರು ಆರೋಪಿಗಳ ಬೆನ್ನತ್ತಿದ ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಸ್ವಿಫ್ಟ್ ಡಿಸೈರ್ ಕಾರು ಮತ್ತು ಫೋನ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಈ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಿ ಜಿಲ್ಲಾ ಪೊಲೀಸ್ ಅಧೀಕ್ಷಕರು ನಗದು ಬಹುಮಾನವನ್ನು ಘೋಷಿಸಿದ್ದಾರೆ.