ಲಕ್ನೋ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ 2005ರಂದು ನಡೆದ ಉಗ್ರರ ದಾಳಿ ಪ್ರಕರಣ ತೀರ್ಪು ಹೊರಬಂದಿದ್ದು, ನಾಲ್ವರು ಆರೋಪಿಗಳು ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ.
ಅಲಹಾಬಾದ್ ಜಿಲ್ಲೆಯ ಪ್ರಯಾಗ್‍ರಾಜ್ ವಿಶೇಷ ನ್ಯಾಯಾಲಯವು ಇಂದು ತೀರ್ಪು ನೀಡಿದೆ. ಈ ಮೂಲಕ ಹದಿನಾಲ್ಕು ವರ್ಷಗಳ ಬಳಿಕ ಆರೋಪಿಗಳು ಶಿಕ್ಷೆಗೆ ಗುರಿಯಾಗಿದ್ದಾರೆ. ಈ ಪ್ರಕರಣ ಐದು ಜನರ ಪೈಕಿ ಮೊಹಮ್ಮದ್ ಅಜೀಜ್ ವಿರುದ್ಧದ ಆರೋಪವನ್ನು ಖುಲಾಸೆಗೊಳಿಸಿ ಕೋರ್ಟ್ ತೀರ್ಪು ನೀಡಿದೆ.
Advertisement
2005 Ayodhya terror attack case: Prayagraj Special Court sentences four convicts to life imprisonment and acquits one person. pic.twitter.com/T5bZKOXsJ2
— ANI UP/Uttarakhand (@ANINewsUP) June 18, 2019
Advertisement
ಇರ್ಫಾನ್, ಆಶೀಖ್ ಇಕ್ಬಾಲ್ ಅಲಿಯಾಸ್ ಫಾರೂಕ್, ಶಕೀಲ್ ಅಹ್ಮದ್ ಹಾಗೂ ಮೊಹಮ್ಮದ್ ನಸೀಂ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ. ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ದಿನೇಶ್ ಚಂದ್ರ ಅವರು ಆರೋಪಿಗಳಿಗೆ ತಲಾ 2.40 ಲಕ್ಷ ರೂ. ದಂಡ ವಿಧಿಸಿದ್ದಾರೆ.
Advertisement
ಏನಿದು ಪ್ರಕರಣ?:
ಅಯೋಧ್ಯೆಯಲ್ಲಿ 2005, ಜುಲೈ 5 ರಂದು ಲಷ್ಕರ್ ಎ- ತೋಯ್ಬಾ ಉಗ್ರ ಸಂಘಟನೆ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಇಬ್ಬರು ಸಾರ್ವಜನಿಕರು ಸಾವನ್ನಪ್ಪಿದ್ದರು. ನಮ್ಮ ಭದ್ರತಾ ಪಡೆಯ ಸಿಬ್ಬಂದಿ ಐವರು ಉಗ್ರರರನ್ನು ಹೊಡೆದುರಳಿಸಿದ್ದರು. ಅಷ್ಟೇ ಅಲ್ಲದೆ 7 ಮಂದಿ ಸಿಆರ್‍ಪಿಎಫ್ ಯೋಧರು ಗಾಯಗೊಂಡಿದ್ದರು.
Advertisement
ಉಗ್ರನ ಕೈನಲ್ಲಿ ಸಿಕ್ಕ ಮೊಬೈಲ್ ಆಧಾರದ ಮೇಲೆ 14 ವರ್ಷಗಳ ಹಿಂದೆಯೇ ಐವರನ್ನು ಪೊಲೀಸರು ಬಂಧಿಸಿದ್ದರು. ತೀರ್ಪಿನ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಪ್ರದೇಶದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಈ ಕುರಿತು ಜೂನ್ 11ರಂದು ವಿಚಾರಣೆ ಪೂರ್ಣಗೊಳಿಸಿದ್ದ ಪ್ರಯಾಗ್‍ರಾಜ್ ವಿಶೇಷ ನ್ಯಾಯಾಲಯವು ಇಂದಿಗೆ ತೀರ್ಪನ್ನು ಕಾಯ್ದಿರಿಸಿತ್ತು.