ಮರಕ್ಕೆ ಕಾರು ಡಿಕ್ಕಿ – ಕುಟುಂಬದ ನಾಲ್ವರು ಸಜೀವ ದಹನ

Public TV
1 Min Read
CAR ACCIDENT 1

ಭೋಪಾಲ್: ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇತ್ತೀಚಿಗೆ ಮದುವೆಯಾಗಿದ್ದ ದಂಪತಿ ಸೇರಿದಂತೆ ಕುಟುಂಬದ ನಾಲ್ವರು ಸಜೀವ ದಹನವಾಗಿರುವ (Burnt) ಘಟನೆ ಮಧ್ಯಪ್ರದೇಶದಲ್ಲಿ (Madhya Pradesh) ನಡೆದಿದೆ.

ಮಧ್ಯಪ್ರದೇಶದ ಹರ್ದಾ (Harda) ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಕಾರು ವೇಗವಾಗಿ ಬಂದು ಮರಕ್ಕೆ ಗುದ್ದಿದ ಪರಿಣಾಮ ಕಾರಿಗೆ ಬೆಂಕಿ ಹತ್ತಿಕೊಂಡು ಕಾರಿನಲ್ಲಿದ್ದ ಮೂವರು ಪುರುಷರು ಮತ್ತು ಒರ್ವ ಮಹಿಳೆ ಜೀವಂತವಾಗಿ ಸುಟ್ಟುಹೋಗಿದ್ದಾರೆ. ಮದುವೆಗೆ ತೆರಳಿದ್ದ ಕುಟುಂಬಸ್ಥರು ಮನೆಗೆ ಹಿಂತಿರುಗುವ ವೇಳೆ ಘಟನೆ ನಡೆದಿದ್ದು, ಆರು ತಿಂಗಳ ಹಿಂದೆ ವಿವಾಹವಾಗಿದ್ದ ದಂಪತಿಗಳು ದುರಂತದಲ್ಲಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: 25 ಬಾರಿ ಚಾಕುವಿನಿಂದ ಇರಿದು ಮಗಳನ್ನೇ ಕೊಂದ ಪಾಪಿ ತಂದೆ!

ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ಅಗ್ನಿಶಾಮಕ ದಳದೊಂದಿಗೆ (Fire Brigade) ಸ್ಥಳಕ್ಕಾಗಮಿಸಿದ್ದು, ಬೆಂಕಿಯಲ್ಲಿ ಬೆಂದಿದ್ದ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲೆಯ ತಿಮರ್ನಿ ಆರೋಗ್ಯ ಸಮುದಾಯ ಕೇಂದ್ರಕ್ಕೆ ಕಳುಹಿಸಲಾಯಿತು. ಅಪಘಾತದಲ್ಲಿ ಮೃತಪಟ್ಟವರನ್ನು ಅಖಿಲೇಶ್ ಕುಶ್ವಾಹ, ಗೋಲು ಚೌಧರಿ, ರಾಕೇಶ್ ಕುಶ್ವಾಹ ಮತ್ತು ಅವರ ಪತ್ನಿ ಶಿವಾನಿ ಎಂದು ಗುರುತಿಸಲಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಆದಾಯ ತೆರಿಗೆ ಅಧಿಕಾರಿಗಳಂತೆ ನಟಿಸಿ ಚಿನ್ನ ಕಳವು – ನಾಲ್ವರ ಬಂಧನ

Share This Article