ಕ್ಯಾನ್ಬೆರಾ: ವಿವಿಧ ರಾಷ್ಟ್ರಗಳ ಮಿಲಿಟರಿ ತರಬೇತಿ ವೇಳೆ ಅಮೆರಿಕದ (America) ಯುದ್ಧ ವಿಮಾನವೊಂದು (Military Aircraft) ಪತನಗೊಂಡ ಪರಿಣಾಮ ನಾಲ್ವರು ಯೋಧರು ಗಂಭೀರವಾಗಿ ಗಾಯಗೊಂಡ ಘಟನೆ ಆಸ್ಟ್ರೇಲಿಯಾದಲ್ಲಿ (Australia) ನಡೆದಿದೆ.
ವಿಮಾನ ಉತ್ತರ ಆಸ್ಟ್ರೇಲಿಯಾದ ಡಾರ್ವಿನ್ ಬಳಿಯ ದ್ವೀಪದಲ್ಲಿ ಪತನಗೊಂಡಿದೆ. ಗಾಯಗೊಂಡ ನಾಲ್ವರು ಸಿಬ್ಬಂದಿಯಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡವರನ್ನು ಹೆಲಿಕಾಪ್ಟರ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ. ಅವರಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅತ್ಯಾಚಾರ, ಕೊಲೆ ಪ್ರಕರಣ- ಸೌಜನ್ಯ ತಾಯಿ, ಆರೋಪ ಹೊತ್ತವರೂ ಅಣ್ಣಪ್ಪನ ಬೆಟ್ಟಕ್ಕೆ ಭೇಟಿ, ಪ್ರಾರ್ಥನೆ
ಈ ಬಗ್ಗೆ ಪ್ರತಿಕ್ರಿಯಿಸಿರುವ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್, ಗಾಯಗೊಂಡ ಯೋಧರು ಅಮೆರಿಕದವರಾಗಿದ್ದಾರೆ. ಇದೊಂದು ದುರದೃಷ್ಟಕರ ಘಟನೆಯಾಗಿದೆ. ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಈ ಸಮಯದಲ್ಲಿ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.
ವಿಮಾನ ಪತನಗೊಂಡ ಸ್ಥಳದಲ್ಲಿ ಅಧಿಕಾರಿಗಳು ಹಾಗೂ ಪೊಲೀಸರು ಬೀಡು ಬಿಟ್ಟಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಸೂಕ್ತ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ವಿಮಾನದಲ್ಲಿ ಬಂದು ದುಬಾರಿ ಸೀರೆ ಕದ್ದು ಪರಾರಿಯಾಗ್ತಿದ್ದ ಖತರ್ನಾಕ್ ಲೇಡಿ ಗ್ಯಾಂಗ್ ಅರೆಸ್ಟ್
Web Stories