ಬೆಂಗಳೂರು: ರಾಜ್ಯ ಐಪಿಎಸ್ ಅಧಿಕಾರಿಗಳ ಗುಳೆ ಪರ್ವ ಆರಂಭವಾಗಿದೆ. ರಾಜ್ಯ ಸೇವೆಗೆ ಗುಡ್ ಬೈ ಹೇಳಿ ಕೇಂದ್ರ ಸೇವೆಗೆ ತೆರಳಲು ನಾಲ್ವರು ಐಪಿಎಸ್ ಅಧಿಕಾರಿಗಳು ತಯಾರಾಗಿದ್ದಾರೆ.
ಈ ಲಿಸ್ಟ್ ನಲ್ಲಿ ಮೊದಲಿಗೆ ಇರೋರು ಮಧುಕರ್ ಶೆಟ್ಟಿ. ರಾಜ್ಯದಲ್ಲಿ ಒಳ್ಳೆಯ ಪೋಸ್ಟಿಂಗ್ ನೀಡದ ಹಿನ್ನೆಲೆಯಲ್ಲಿ ಕೇಂದ್ರದ ಕದ ತಟ್ಟಿದ್ದಾರೆ. ಇದೀಗ ನ್ಯಾಷನಲ್ ಪೊಲೀಸ್ ಅಕಾಡೆಮಿ ಐಜಿಯಾಗಿ ಮಧುಕರ್ ಶೆಟ್ಟಿ ನಿಯೋಜನೆಗೊಂಡಿದ್ದಾರೆ.
Advertisement
ಖಡಕ್ ಮಹಿಳಾ ಅಧಿಕಾರಿ ಸೋನಿಯಾ ನಾರಂಗ್ ಅವರು ಲೋಕಾಯುಕ್ತದಲ್ಲಿ ನಡೆದಿದ್ದ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದವರು. ಪಿಯುಸಿ ಪ್ರಶ್ನೆ ಪತ್ರಿಕೆ ಲೀಕಾಸುರರನ್ನ ಹೆಡೆಮುರಿ ಕಟ್ಟಿದವರು. ಸದ್ಯ ಸಿಐಡಿ ಯಲ್ಲಿ ಡಿಐಜಿ ಯಾಗಿ ಕರ್ತವ್ಯ ನಿರ್ವಹಿಸ್ತಿದ್ದು, ಏಪ್ರಿಲ್ 1ರಿಂದ ಕೇಂದ್ರ ಸೇವೆಗೆ ತೆರಳಲಿದ್ದಾರೆ. ಈ ಮೂಲಕ ಎನ್‍ಐಎ ಡಿಐಜಿಯಾಗಿ ಹೊಸ ಇನ್ನಿಂಗ್ಸ್ ಶುರು ಮಾಡಲಿದ್ದಾರೆ. ಕಳೆದ ವರ್ಷವೇ ಕೇಂದ್ರ ಸೇವೆಗೆ ತೆರಳಬೇಕಿದ್ದ ನಾರಂಗ್ ಅವರನ್ನು ರಾಜ್ಯ ಸರ್ಕಾರ ಕಳುಹಿಸಿಕೊಟ್ಟಿರಲಿಲ್ಲ.
Advertisement
ದಕ್ಷ ಪ್ರಾಮಾಣಿಕ ಅಧಿಕಾರಿ ಲಾಭೂರಾಮ್ ಅವರ ಹೆಸರು ಕೇಳಿದಾಕ್ಷಣ ಒಳ್ಳೆ ಆಫೀಸರ್ ಅಂತಾರೆ ಜನ. ಸದ್ಯ ಬೆಂಗಳೂರು ಉತ್ತರ ವಿಭಾಗದ ಡಿಸಿಪಿಯಾಗಿರೋ ಲಾಭೂರಾಮ್ ಕೇಂದ್ರಕ್ಕೆ ತೆರಳಲಿದ್ದಾರೆ. ಇವರ ಜೊತೆಗೆ ಸಿಸಿಬಿ ಡಿಸಿಪಿ ಕೌಶಲೇಂದ್ರ ಕುಮಾರ್ ಸಹ ಕೇಂದ್ರ ನಿಯೋಜನೆಗೆ ತೆರಳಲಿದ್ದಾರೆ. ಕೇಂದ್ರ ಗುಪ್ತಚರ ಇಲಾಖೆಗೆ ಇಬ್ಬರೂ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.
Advertisement
ಈ ನಾಲ್ವರ ಟ್ರಾನ್ಸ್ ಫರ್ ಗೆ ಕೇಂದ್ರ ಗೃಹ ಇಲಾಖೆ ಸಮ್ಮತಿ ನೀಡಿದೆ. ಆದ್ರೆ ಇಂಥ ಒಳ್ಳೆ ಆಫೀಸರ್ ಗಳನ್ನು ಸರ್ಕಾರ ಉಳಿಸಿಕೊಳ್ಳೋಕೆ ಆಗ್ತಿಲ್ವಲ್ಲ ಅನ್ನೋದೇ ವಿಪರ್ಯಾಸ.