ರಾಯ್ಪುರ: ಭದ್ರತಾ ಪಡೆ (Security Personnel) ಹಾಗೂ ಮಾವೋವಾದಿಗಳ (Maoists) ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ಮಾವೋವಾದಿಗಳು ಸಾವನ್ನಪ್ಪಿದ ಘಟನೆ ಛತ್ತೀಸ್‌ಗಢದ (Chhattisgarh) ಬಸ್ತಾರ್ ಪ್ರದೇಶದಲ್ಲಿ ನಡೆದಿದೆ.
ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ದಕ್ಷಿಣ ಅಬುಜ್‌ಮಾದ್‌ನ ಕಾಡಿನಲ್ಲಿ ಶನಿವಾರ ಸಂಜೆ ಭದ್ರತಾ ಸಿಬ್ಬಂದಿ ಹಾಗೂ ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಗುಂಡಿನ ದಾಳಿಗೆ ನಾಲ್ವರು ಮಾವೋವಾದಿಗಳು ಬಲಿಯಾಗಿದ್ದಾರೆ. ಅಲ್ಲದೇ ಜಿಲ್ಲಾ ಮೀಸಲು ಗಾರ್ಡ್‌ನ (ಡಿಆರ್‌ಜಿ) ಹೆಡ್ ಕಾನ್ಸ್‌ಟೇಬಲ್ ಸನ್ನು ಕರಮ್ ತೀವ್ರಗಾಯಗೊಂಡು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಕಲಾಹಬ್ಬ 22ನೇ ಚಿತ್ರಸಂತೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಗುಂಡಿನ ದಾಳಿ ಬಳಿಕ ನಾಲ್ವರು ಮಾವೋವಾದಿಗಳ ಮೃತದೇಹ ಮತ್ತು ಎಕೆ -47 ರೈಫಲ್ ಮತ್ತು ಸ್ವಯಂ ಲೋಡಿಂಗ್ ರೈಫಲ್ (ಎಸ್‌ಎಲ್‌ಆರ್) ಸೇರಿದಂತೆ ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ| ಪ್ರಿಯಕರನ ಜೊತೆಯಲ್ಲಿದ್ದ 8 ತಿಂಗಳ ಗರ್ಭಿಣಿ ಅನುಮಾನಾಸ್ಪದ ಸಾವು