ಲಕ್ನೋ: ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ (Truck) ಕಾರು (Car) ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು (MBBS Students) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಅಮ್ರೋಹಾ (Amroha) ಜಿಲ್ಲೆಯಲ್ಲಿ ನಡೆದಿದೆ,
ಅಮ್ರೋಹಾ ಜಿಲ್ಲೆಯ ರಾಜಬ್‌ಪುರ ಪೊಲೀಸ್ ಠಾಣೆ ಪ್ರದೇಶದ ಫ್ಲೈಓವರ್ ಬಳಿ ಬುಧವಾರ ರಾತ್ರಿ 10 ಗಂಟೆಯ ಸುಮಾರಿಗೆ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಕಾರು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಪುಟಿನ್ ಜೊತೆ ಸಭೆಗೆ ನನಗೆ ಅವಕಾಶ ನೀಡಿಲ್ಲ: ರಾಹುಲ್ ಅಸಮಾಧಾನ
ಮೃತ ವಿದ್ಯಾರ್ಥಿಗಳು ಮೀರತ್‌ನಿಂದ ಗಾಜಿಯಾಬಾದ್‌ಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆಯ ಬಳಿಕ ಕಾರಿನ ಭಾಗಗಳನ್ನು ಕತ್ತರಿಸಿ ಮೃತದೇಹಗಳನ್ನು ಕಾರಿನಿಂದ ಹೊರತೆಗೆಯಲಾಗಿದೆ. ಅಪಘಾತದ ಬಳಿಕ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಟ್ರಾಫಿಕ್ ಕ್ಲಿಯರ್ ಮಾಡಿದ್ದಾರೆ. ಯಾವುದೇ ಸೂಚನೆಗಳಿಲ್ಲದೆ ರಾತ್ರಿ ರಸ್ತೆ ಬದಿ ಟ್ರಕ್ ನಿಲ್ಲಿಸಿದ್ದ ಪರಿಣಾಮ ಅಪಘಾತವಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಇದನ್ನೂ ಓದಿ: ಲಿವ್ ಇನ್ ಗೆಳತಿ ಖರ್ಚು ನಿಭಾಯಿಸಲು ಕಳ್ಳತನಕ್ಕಿಳಿದಿದ್ದ ರೋಮಿಯೋ ಸೇರಿ ಇಬ್ಬರು ಅರೆಸ್ಟ್

