ಮೈಸೂರು: ಸಂಕ್ರಾಂತಿ ಹಬ್ಬಕ್ಕೆ ದನಗಳಿಗೆ ಕಿಚ್ಚು ಹಾಯಿಸುವಾಗ ನಾಲ್ವರು ಗಾಯಗೊಂಡಿರುವ ದುರ್ಘಟನೆ ಜಿಲ್ಲೆಯ ಹೊರವಲಯದ ಸಿದ್ದಲಿಂಗಪುರದಲ್ಲಿ ನಡೆದಿದೆ.
ಸಿದ್ದಲಿಂಗಪುರದ ನಿವಾಸಿಗಳಾದ ಪುರುಷೋತ್ತಮ್, ಸಂಜು, ಜೀವನ್ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪುರುಷೋತ್ತಮ್(24) ಗಂಭೀರ ಗಾಯಗೊಂಡಿದ್ದು, ಜಿಲ್ಲೆಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement
Advertisement
ಸಂಕ್ರಾಂತಿ ಹಬ್ಬದಲ್ಲಿ ಎತ್ತು, ದನಗಳಿಗೆ ಸಿಂಗರಿಸಿ ಕಿಚ್ಚು ಹಾಯಿಸಲಾಗುತ್ತದೆ. ಹೀಗೆ ಹಬ್ಬದ ಸಂಭ್ರಮದಲ್ಲಿ ಮೈಸೂರು-ಬೆಂಗಳೂರು ರಸ್ತೆಯಲ್ಲಿ ದನಗಳಿಗೆ ಕಿಚ್ಚು ಹಾಯಿಸುವಾಗ ಈ ದುರ್ಘಟನೆ ಸಂಭವಿಸಿದೆ. ಕಿಚ್ಚು ಹಾಯಿಸುವಾಗ ಎತ್ತು ತುಳಿದ ಪರಿಣಾಮ ಯುವಕನೋರ್ವ ಗಾಯಗೊಂಡಿದ್ದು, ಆತನನ್ನು ಕೂಡ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv