ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದಲ್ಲಿ 4 ತಿಂಗಳಿನ ಭ್ರೂಣ ಶಿಶುವೊಂದು ಚರಂಡಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.
ಭ್ರೂಣ ಶಿಶುವನ್ನು ಎಸೆದಿರುವ ಬಗ್ಗೆ ಮಕ್ಕಳ ಸಹಾಯವಾಣಿಗೆ ಕರೆ ಬಂದ ಹಿನ್ನೆಲೆಯಲ್ಲಿ ಅಂಗನವಾಡಿ ಮೇಲ್ವಿಚಾರಕಿ, ಅಂಗನವಾಡಿ ಕಾರ್ಯಕರ್ತರು, ಮಕ್ಕಳ ಸಹಾಯವಾಣಿ ಸಿಬ್ಬಂದಿಯವರೊಂದಿಗೆ ತಾವರಗೇರಾ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Advertisement
Advertisement
ಭ್ರೂಣವನ್ನು ಪಟ್ಟಣ ಪಂಚಾಯಿತಿ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ಸಹಕಾರದೊಂದಿಗೆ ತಾವರಗೇರಾ ಗ್ರಾಮದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪರೀಕ್ಷಿಸಲಾಗಿದೆ. ಇದು 4 ರಿಂದ 5 ತಿಂಗಳಿನ ಭ್ರೂಣವಾಗಿದ್ದು, ಭ್ರೂಣವು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು. ಇದನ್ನೂ ಓದಿ: ಪಿಎಸ್‍ಐ ಹಗರಣ ಕೇಸ್- ಕೋರ್ಟ್‍ಗೆ ಚಾರ್ಜ್‍ಶೀಟ್ ಸಲ್ಲಿಕೆ
Advertisement
Advertisement
ಈ ಕೃತ್ಯವನ್ನು ಎಸಗಿದವರನ್ನು ಪತ್ತೆ ಮಾಡಿ ಆರೋಪಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ತಾವರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರೋಹಿಣಿ ಕೋಟಗಾರ ತಿಳಿಸಿದ್ದಾರೆ. ಇದನ್ನೂ ಓದಿ: ಪ್ರತಿ ಜಿಲ್ಲೆಯ ಯುವ ಮೋರ್ಚಾ ಕಾರ್ಯಕರ್ತರಿಂದ ಪ್ರವೀಣ್ ಕುಟುಂಬಕ್ಕೆ ಸಹಾಯ: ತೇಜಸ್ವಿ ಸೂರ್ಯ