ಉಡುಪಿ: ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ (Murder) ಮಾಡಿದ್ದ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ದುಷ್ಕೃತ್ಯವನ್ನು ವಿರೋಧಿಸುವುದನ್ನು ಬಿಟ್ಟು ಹಂತಕನ ಫೋಟೋಗೆ ಕಿರೀಟ ಇಟ್ಟು ಇನ್ಸಾಗ್ರಾಮ್ನಲ್ಲಿ ಸ್ಟೋರಿ ಹಾಕಿದ್ದ ವ್ಯಕ್ತಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
Advertisement
ಹಿಂದೂ ಮಂತ್ರ ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂತಕ ಪ್ರವೀಣ್ ಅರುಣ್ ಚೌಗುಲೆಯ ಫೋಟೋ ಹಾಕಿ, ಆತನಿಗೆ ಕಿರೀಟ ಇಟ್ಟು, 15 ನಿಮಿಷದಲ್ಲಿ 4 ಕೊಲೆ, ಇದು ವರ್ಲ್ಡ್ ರೆಕಾರ್ಡ್ ಎಂದು ಬರೆದು ವ್ಯಕ್ತಿಯೊಬ್ಬ ವಿಕೃತಿ ಮೆರೆದಿದ್ದಾನೆ. ಇದನ್ನೂ ಓದಿ: ನಾಲ್ವರ ಕೊಂದ ಆರೋಪಿ ಮೇಲೆ ಜನಾಕ್ರೋಶ; ರಸ್ತೆ ತಡೆದು ಸಾರ್ವಜನಿಕರ ಪ್ರತಿಭಟನೆ, ಲಾಠಿ ಪ್ರಹಾರ – ಉಡುಪಿ ಉದ್ವಿಗ್ನ
Advertisement
Advertisement
ಈ ವಿಚಾರ ಉಡುಪಿ ಪೊಲೀಸರ (Udupi Police) ಗಮನಕ್ಕೆ ಬಂದಿದ್ದು, ತಕ್ಷಣ ಅವರು ಕ್ರಮಕ್ಕೆ ಮುಂದಾಗಿದ್ದಾರೆ. ಪೋಸ್ಟ್ ಹಾಕಿದಾತನ ವಿರುದ್ಧ ಸೆನ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ. ಕೇಸ್ ದಾಖಲಾಗುತ್ತಿದ್ದಂತೆ ಹಿಂದೂ ಮಂತ್ರ ಖಾತೆಯಲ್ಲಿ ಹಾಕಲಾಗಿದ್ದ ಸ್ಟೋರಿ ಡಿಲೀಟ್ ಆಗಿದೆ. ಇದನ್ನೂ ಓದಿ: ಮುಸ್ಲಿಂ ಸ್ಪೀಕರ್ಗೆ ಬಿಜೆಪಿಯವರೂ ನಮಸ್ಕರಿಸುತ್ತಾರೆ: ಜಮೀರ್ ಮತ್ತೊಂದು ಎಡವಟ್ಟು