ದಾವಣಗೆರೆ: ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾದ ಘಟನೆ ಇಂದು ಬೆಳಕಿಗೆ ಬಂದಿದೆ.
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಬೆಳಲಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪಾಲಾಕ್ಷಿ(34) ಮತ್ತು ಶಶಿಕಲಾ(28) ದಂಪತಿ, 7 ವರ್ಷದ ಮಗ ಹಾಗೂ 6 ವರ್ಷದ ಕಂದಮ್ಮ ಮೃತ ದುರ್ದೈವಿಗಳು.
Advertisement
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕುಟುಂಬ ಆತ್ಮಹತ್ಯೆಗೆ ಶರಣಾಗಿದೆ ಎನ್ನಲಾಗಿದ್ದು, ಬೆಳಿಗ್ಗೆ ಸಂಬಂಧಿಕರು ಬಾಗಿಲು ತೆರೆದಾಗ ಈ ವಿಚಾರ ಬೆಳಕಿಗೆ ಬಂದಿದೆ.
Advertisement
ಘಟನಾ ಸ್ಥಳಕ್ಕೆ ಬಸವಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.