ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಮಗು ಸೇರಿ ನಾಲ್ವರ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರಿನ ನವರಂಗ್ ಸಿಗ್ನಲ್ ಬಳಿ ಇಂದು ಮುಂಜಾನೆ 3:30ರ ಸುಮಾರಿಗೆ ಇಂಡಿಕಾ ಕಾರಿಗೆ ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಗುದ್ದಿದ ಪರಿಣಾಮ ಈ ಅವಘಡ ಸಂಭವಿಸಿದೆ.
ಗಾಯಾಳುಗಳು ಪೋರ್ಟಿಸ್ ಹಾಗು ಕೆ.ಸಿ ಜನರಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಗುವಿಗೆ ಜ್ವರ ಎಂದು ಪೋಷಕರು ಪರಿತಪಿಸುವಾಗ ಕಾರು ತೆಗೆದುಕೊಂಡು ಬಂದ ಆಪ್ತ ಗೆಳೆಯ ಕೂಡ ಆಸ್ಪತ್ರೆ ಪಾಲಾಗಿದ್ದಾರೆ. ಬಸ್ ಚಾಲಕನ ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಡ್ರೈವರ್ ಹಾಗೂ ನಿರ್ವಾಹಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮಲ್ಲೇಶ್ವರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.