ಬೆಂಗಳೂರು: ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ ನಾಲ್ಕು ಖಾಸಗಿ ಬಸ್‌ಗಳಿಗೆ ಬೆಂಕಿ ಬಿದ್ದಿದ್ದು, ಸುಟ್ಟು ಕರಕಲಾಗಿವೆ. ಆನೇಕಲ್ (Anekal) ತಾಲೂಕಿನ ಹಳೆ ಚಂದಾಪುರದಲ್ಲಿ ಘಟನೆ ನಡೆದಿದೆ.
ಏಕಾಏಕಿ ಒಂದು ಬಸ್‌ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬಳಿಕ ಅಕ್ಕಪಕ್ಕದಲ್ಲಿದ್ದ ಬಸ್‌ಗಳಿಗೂ ಬೆಂಕಿ ತಗುಲಿದೆ. ಹೀಗೆ ಧಗಧಗೆನೆ ಹೊತ್ತಿ ಉರಿದ ನಾಲ್ಕು ಬಸ್‌ಗಳು ಬೆಂಕಿಗೆ ಆಹುತಿಯಾಗಿವೆ. ಇದನ್ನೂ ಓದಿ: ರಾಯಚೂರು | ರೈಲ್ವೇ ಟ್ರ್ಯಾಕ್ ನಿರ್ಮಾಣಕ್ಕೆ ಅಗೆದಿದ್ದ ಗುಂಡಿಯಲ್ಲಿ ಬಿದ್ದು ಬಾಲಕ ಸಾವು
ಸದ್ಯ ಬಸ್‌ಗಳ ಮಾಲೀಕರ ವಿವರ ಪತ್ತೆಯಾಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ತಂಡ ದೌಡಾಯಿಸಿದೆ. ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
