ರಾಯಚೂರು: ಪ್ರಧಾನಿ ಮೋದಿ ಪಿಎಂ ಕೇರ್ ಫಾರ್ ಚಿಲ್ಡ್ರನ್ ಕಾರ್ಯಕ್ರಮದಲ್ಲಿ ಜಿಲ್ಲೆಯ ದೇವದುರ್ಗ ತಾಲೂಕಿನ 4 ಮಕ್ಕಳಿಗೆ ಸೌಲಭ್ಯ ನೀಡಲಾಗುತ್ತಿದೆ. ಈ ಬಗ್ಗೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಕಾರ್ಯಕ್ರಮದ ವಿವರಣೆ ನೀಡಿದರು.
ನಗರದ ಜಿಲ್ಲಾ ಪಂಚಾಯತಿ ಕಚೇರಿ ವಿಸಿ ಹಾಲ್‍ನಲ್ಲಿ ಆಯೋಜಿಸಿದ್ದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ್, ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ್, ಹಾಗೂ ಹಲವಾರು ಅಧಿಕಾರಿಗಳು ಭಾಗಿಯಾಗಿದ್ದರು. ಕೊರೊನಾದಿಂದ ತಂದೆ-ತಾಯಿ ಕಳೆದುಕೊಂಡಿರುವ ಜಿಲ್ಲೆಯ ನಾಲ್ಕು ಮಕ್ಕಳಿಗೆ ಪಿಎಂ ಕೇರ್ ಮೂಲಕ ಸಹಾಯ ಮಾಡಲಾಗುತ್ತಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಮೆಂಟಲ್ ಗಿರಾಕಿಯ ರೀತಿ ಆಡಬಾರದು, ಪ್ರಬುದ್ಧವಾಗಿ ಮಾತನಾಡಬೇಕು: ಸಿ.ಟಿ.ರವಿ ವ್ಯಂಗ್ಯ
Advertisement
Advertisement
ಈ ಯೋಜನೆ ಮೂಲಕ ಕೇಂದ್ರ ಸರ್ಕಾರದಿಂದ ಮಕ್ಕಳು 23ನೇ ವರ್ಷಕ್ಕೆ ಬಂದಾಗ 10 ಲಕ್ಷ ರೂ. ಸಹಾಯ ಧನ ನೇರವಾಗಿ ಆಯಾ ಫಲಾನುಭವಿ ಅಕೌಂಟ್‍ಗೆ ಜಮೆ ಆಗಲಿದೆ. ಮಕ್ಕಳ ಪೋಷಕರಿಗೆ ಪ್ರತಿ ತಿಂಗಳು 4 ಸಾವಿರ ನೀಡಲಾಗುತ್ತದೆ. ಕೇಂದ್ರೀಯ ವಿದ್ಯಾಲಯ ಸೇರಿ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಾಗುತ್ತದೆ. ರಾಯಚೂರಿನ ನಾಲ್ಕು ಮಕ್ಕಳಿಗೆ ಈ ಸೌಲಭ್ಯ ನೀಡಲಾಗುತ್ತದೆ ಎಂದು ಸಂಸದ ಅಮರೇಶ್ವರ ನಾಯಕ್ ಪಿಎಂ ವಿಡಿಯೋ ಕಾನ್ಫರೆನ್ಸ್ ಬಳಿಕ ತಿಳಿಸಿದ್ದಾರೆ. ಇದನ್ನೂ ಓದಿ: ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ಯೋಜನೆಗೆ ಇಂದು ಚಾಲನೆ: ಮಕ್ಕಳಿಗೆ ಏನು ಸಿಗುತ್ತೆ?