– ದಾಳಿಯಲ್ಲಿ ಹಲವರಿಗೆ ಗಾಯ, ಮರ‍್ನಾಲ್ಕು ಜಿಲ್ಲೆಗಳಲ್ಲಿ ಕರ್ಫ್ಯೂ
ಇಂಫಾಲ: ಮಣಿಪುರದಲ್ಲಿ 2024ರ ನೂತನ ವರ್ಷದ ಮೊದಲ ದಿನವೇ ಮತ್ತೆ ಹಿಂಸಾಚಾರ (Manipur Violence) ಭುಗಿಲೆದ್ದಿದೆ. ಘಟನೆಯಲ್ಲಿ ಗುಂಡು ಹಾರಿಸಿ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಹಿಂಸಾಚಾರದಿಂದಾಗಿ ಕಣಿವೆ ಜಿಲ್ಲೆಗಳಲ್ಲಿ ಮತ್ತೆ ಕರ್ಫ್ಯೂ (Curfew) ಹೇರಿರುವುದಾಗಿ ಮೂಲಗಳು ತಿಳಿಸಿವೆ.
ಹಿಂಸಾಚಾರದ ವೇಳೆ ಅಪರಿಚಿತರ ಗುಂಪೊಂದು ಸುಲಿಗೆಗಾಗಿ ಆಟೊಮೆಟಿಕ್ ವೆಪನ್ಸ್‌ಗಳೊಂದಿಗೆ (ಸ್ವಯಂಚಾಲಿತ ಶಸ್ತ್ರಾಸ್ತ್ರ) (Automatic Weapons) ದಾಳಿ ಮಾಡಿತು ಎಂದು ತೌಬಲ್ ಜಿಲ್ಲೆಯ ಸ್ಥಳೀಯರು ಹೇಳಿದ್ದಾರೆ. ಈ ಹಿಂಸಾಚಾರವನ್ನು ಸಿಎಂ ಎನ್.ಬಿರೇನ್ ಸಿಂಗ್ ಅವರು ಖಂಡಿಸಿದ್ದು, ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಇಬ್ಬರು ವಿದ್ಯಾರ್ಥಿಗಳ ಭೀಕರ ಹತ್ಯೆ ಪ್ರಕರಣ – ಇಬ್ಬರು ಮಹಿಳೆಯರು ಸೇರಿ ನಾಲ್ವರ ಬಂಧನ
Advertisement
Advertisement
ಅಮಾಯಕ ಜನರ ಹತ್ಯೆಯಿಂದ ಅಪಾರ ದುಃಖವಾಗಿದೆ. ನಾವು ಆರೋಪಿಗಳನ್ನು ಹಿಡಿಯಲು ವಿಶೇಷ ಪೊಲೀಸ್ ಪಡೆಗಳನ್ನ ಸಜ್ಜುಗೊಳಿಸಿದ್ದೇವೆ. ದುಷ್ಕರ್ಮಿಗಳನ್ನು ಪತ್ತೆಹಚ್ಚಲು ಸಾರ್ವಜನಿಕರು ಸಹ ಸಹಕಾರ ನೀಡಬೇಕೆಂದು ನಾನು ಕೈಮುಗಿದು ಬೇಡಿಕೊಳ್ಳುತ್ತೇನೆ. ಪ್ರತಿಯೊಬ್ಬರಿಗೂ ನ್ಯಾಯ ಒದಗಿಸಲು ಸರ್ಕಾರ ಶಕ್ತಿ ಮೀರಿ ಪ್ರಯತ್ನಿಸುತ್ತದೆ ಎಂದು ಭರವಸೆ ನೀಡಿದ್ದಾರೆ.
Advertisement
ಅಲ್ಲದೇ 2024ರ ಹೊಸ ವರ್ಷದ ಮೊದಲ ದಿನವೇ ನಡೆದಿರುವ ಹಿಂಸಾಚಾರವನ್ನು ಗಂಭೀರವಾಗಿ ಸರ್ಕಾರ ಪರಿಗಣಿಸಿದೆ. ಸೂಕ್ತ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳು ಆಡಳಿತ ಪಕ್ಷದ ಎಲ್ಲಾ ಸಚಿವರು ಹಾಗೂ ಶಾಸಕರ ತುರ್ತು ಸಭೆ ಕರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಭಾರತದ ವಿರುದ್ಧ ಯುದ್ಧ ರೂಪಿಸಲು 2 ರಾಷ್ಟ್ರಗಳ ಭಯೋತ್ಪಾದಕರೊಂದಿಗೆ ಸಂಚು; ಮಣಿಪುರದಲ್ಲಿ ಶಂಕಿತ ಅರೆಸ್ಟ್
Advertisement
ಕೆಲ ಜಲ್ಲೆಗಳಲ್ಲಿ ಕರ್ಫ್ಯೂ: ಹೊಸ ಹಿಂಸಾಚಾರದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಮಣಿಪುರದ ಕಣಿವೆ ಪ್ರದೇಶಗಳಾದ ತೌಬಲ್, ಇಂಫಾಲ ಪೂರ್ವ ಮತ್ತು ಇಂಫಾಲ ಪಶ್ಚಿಮ, ಕಕ್ಚಿಂಗ್ ಮತ್ತು ಬಿಷ್ಣುಪುರ ಜಿಲ್ಲೆಗಳಲ್ಲಿ ಕರ್ಫ್ಯೂ ಹೇರಿಕೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2023ರ ವರ್ಷದಲ್ಲಿ ಮೇ 3ರಂದು ದೊಡ್ಡ ಪ್ರಮಾಣದಲ್ಲಿ ಜನಾಂಗೀಯ ಸಂಘರ್ಷ ಏರ್ಪಟ್ಟಿತ್ತು. ಈ ಘಟನೆ ಬಳಿಕ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ ಮತ್ತಷ್ಟು ಕಾವು ಪಡೆದುಕೊಂಡಿತ್ತು. ಈ ಸಂಘರ್ಷದ ಪರಿಣಾಮ 180ಕ್ಕೂ ಹೆಚ್ಚು ಸಾವುಗಳು ಸಂಭವಿಸಿದವು. ಸುಮಾರು 60,000 ಜನ ನಿರಾಶ್ರಿತರಾದರು. ಇಷ್ಟಾದರೂ ಮಣಿಪುರದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ವರ್ಷಾರಂಭದ ಮೊದಲ ದಿನವೇ ನಾಲ್ವರು ಗುಂಡಿನ ದಾಳಿಗೆ ಬಲಿಯಾಗಿರುವುದು ಸ್ಥಳೀಯಲ್ಲಿ ಆತಂಕ ಹೆಚ್ಚಿಸಿದೆ.