ಕಾರವಾರ: ಭಟ್ಕಳದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ನಿಲಯದಲ್ಲಿ ಆಹಾರ ಸೇವಿಸಿ 4 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, ಓರ್ವ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ.
ವಿದ್ಯಾರ್ಥಿನಿ ವರ್ಷಿಣಿ ನಾಯ್ಕ ತೀವ್ರ ಅಸ್ವಸ್ಥಗೊಂಡಿದ್ದು, ವಿದ್ಯಾರ್ಥಿನಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಕಳೆದ ಸೋಮವಾರ ವಸತಿ ನಿಲಯದಲ್ಲಿ ದೋಷಪೂರಿತ ಆಹಾರ ಸೇವಿಸಿ 12 ಜನ ಅಸ್ವಸ್ಥರಾಗಿದ್ದರು ಆದರೂ ಕೂಡ ಹಾಸ್ಟೆಲ್ ವಾರ್ಡನ್ ಯಾವುದೇ ಕ್ರಮ ಕೈಗೊಳ್ಳದೇ ಅಸಡ್ಡೆ ತೋರಿದ್ದು ಮತ್ತಷ್ಟು ವಿದ್ಯಾರ್ಥಿನಿಯರು ಅಸ್ವಸ್ಥರಾಗುವಂತೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
Advertisement
Advertisement
ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಎಸ್. ಪುರುಷೋತ್ತಮ್, ಕಳೆದ ಬಾರಿ ವಿದ್ಯಾರ್ಥಿಗಳು ಗ್ಯಾಸ್ಟಿಕ್ ಸಮಸ್ಯೆಯಿಂದ ಅಸ್ಪಸ್ಥರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಘಟನೆ ನಡೆದ ಬಳಿಕ ಸ್ಥಳಕ್ಕೆ ಭೇಟಿ ನೀಡಿ ಪರೀಶಿಲನೆ ನಡೆಸಿದ್ದೆ. ಈ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಕಂಡು ಬರಲಿಲ್ಲ. ಪ್ರಸ್ತುತ ಘಟನೆಯ ಕುರಿತು ಹಾಸ್ಟೆಲ್ ಅಧಿಕಾರಿಗಳು ಮಾಹಿತಿ ನೀಡಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆದು ಅಧಿಕಾರಿಗಳ ನಿರ್ಲಕ್ಷದಿಂದ ಘಟನೆ ನಡೆದಿದ್ದಾರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
Advertisement
Advertisement