ರಾಂಚಿ: ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ (Rape Case), ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ (Social Media) ಅಪ್‍ಲೋಡ್ ಮಾಡಿದ ಆರೋಪದ ಮೇಲೆ ನಾಲ್ವರು ಅಪ್ರಾಪ್ತರನ್ನು ಜಾರ್ಖಂಡ್ (Jharkhand) ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಘಟನೆ ಏಪ್ರಿಲ್ 21 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 15-17 ವರ್ಷ ವಯಸ್ಸಿನ ಅಪ್ರಾಪ್ತರು 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ವೀಡಿಯೋ ಮಾಡಿದ್ದಾರೆ. ಈ ವಿಚಾರ ಬಹಿರಂಗಪಡಿಸಿದರೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವುದಾಗಿ ಯುವತಿಗೆ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮಗನಿಗೆ ಈಜು ಕಲಿಸಲು ಹೋಗಿದ್ದ ತಂದೆ ಕೃಷಿ ಹೊಂಡದಲ್ಲಿ ಮುಳುಗಿ ಸಾವು
ಮೇ 3 ರಂದು ಸಾಮಾಜಿಕ ಜಾಲತಾಣದಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಈ ಸಂಬಂಧ ಯುವತಿ ದೂರು ನೀಡಿದ ಬಳಿಕ ಕೃತ್ಯದಲ್ಲಿ ಭಾಗಿಯಾದ ಎಲ್ಲಾ ಬಾಲಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಏ.21 ರಂದು ನಾಲ್ವರು ರಾಮಗಢ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಲಿದ್ದಲು ಡಂಪಿಂಗ್ ಯಾರ್ಡ್ ಬಳಿ ಯುವತಿಯನ್ನು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ವಾಯುಸೇನೆಯ ವಾಹನದ ಮೇಲೆ ಉಗ್ರರ ದಾಳಿ – ಹಲವರನ್ನು ವಶಕ್ಕೆ ಪಡೆದ ಸೇನೆ