ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu Kashmir) ಭದ್ರತಾ ಪಡೆಗಳು (Security Forces) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಾಲ್ವರು ಭಯೋತ್ಪಾದಕರನ್ನು (Terrorists) ಹತ್ಯೆ ಮಾಡಲಾಗಿದೆ ಎಂದು ಭಾರತೀಯ ಸೇನೆಯ (Indian Army) ಅಧಿಕಾರಿಗಳು ತಿಳಿಸಿದ್ದಾರೆ.
ಭಾರತೀಯ ಸೇನೆಯ ವಿಶೇಷ ಪಡೆಗಳು, ರಾಷ್ಟ್ರೀಯ ರೈಫಲ್ಸ್, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಇತರ ಪಡೆಗಳೊಂದಿಗೆ ಪೂಂಚ್‌ನ ಸಿಂಧರಾ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಇದನ್ನೂ ಓದಿ: ಕೇರಳದ ಮಾಜಿ ಸಿಎಂ, ಕೈ ನಾಯಕ ಉಮ್ಮನ್ ಚಾಂಡಿ ನಿಧನ
Advertisement
Advertisement
ನಿನ್ನೆ ರಾತ್ರಿ 11:30 ರ ಸುಮಾರಿಗೆ ಭದ್ರತಾ ಪಡೆಗಳು ಉಗ್ರರು ಅಡಗಿದ್ದ ಸ್ಥಳವನ್ನು ಸುತ್ತುವರಿದರು. ನಂತರ ರಾತ್ರಿ ಸಮಯದಲ್ಲಿ ಕಣ್ಗಾವಲು ಉಪಕರಣಗಳೊಂದಿಗೆ ಡ್ರೋನ್‌ಗಳನ್ನು ನಿಯೋಜಿಸಲಾಯಿತು. ಇಂದು ಮುಂಜಾನೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಭಾರೀ ಗುಂಡಿನ ಚಕಮಕಿಯೊಂದಿಗೆ ಎನ್‌ಕೌಂಟರ್ (Encounter) ಮಾಡಲಾಗಿದೆ.
Advertisement
Advertisement
ಕಾರ್ಯಾಚರಣೆಯಲ್ಲಿ ಹತರಾದ ಭಯೋತ್ಪಾದಕರು ವಿದೇಶಿ ಭಯೋತ್ಪಾದಕರಾಗಿದ್ದು, ಅವರ ಗುರುತು ಪತ್ತೆ ಹಚ್ಚಲಾಗಿಲ್ಲ. ಅವರ ಗುರುತು ಪತ್ತೆಗೆ ತನಿಖೆ ಮುಂದುವರಿದಿದೆ ಎಂದು ಸೇನೆ ತಿಳಿಸಿದೆ. ಇದನ್ನೂ ಓದಿ: ಪ್ರಯಾಣಿಕನ ಮೊಬೈಲ್ ಬ್ಲಾಸ್ಟ್ – ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ
Web Stories