ತಿರುವನಂತಪುರ: ಕೇರಳದ (Kerala) ಪಾಲಕ್ಕಾಡ್ (Palakkad) ಜಿಲ್ಲೆಯ ಶೋರನೂರ್‌ನಲ್ಲಿ (Shoranur) ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದು ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.
ಮೃತರನ್ನು ತಮಿಳುನಾಡು (Tamil Nadu) ಮೂಲದ ವಲ್ಲಿ, ರಾಣಿ, ಲಕ್ಷ್ಮಣ್ ಹಾಗೂ ಇನ್ನೋರ್ವನ ಗುರುತು ಪತ್ತೆಯಾಗಿಲ್ಲ. ಇದನ್ನೂ ಓದಿ: ದೀಪಾವಳಿ ಹಿನ್ನೆಲೆ ಗಾಜನೂರಿಗೆ ಭೇಟಿ ಕೊಟ್ಟ ಹ್ಯಾಟ್ರಿಕ್ ಹೀರೋ ಶಿವಣ್ಣ
ಘಟನಾ ಸ್ಥಳದಿಂದ ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇನ್ನೋರ್ವ ಕಾರ್ಮಿಕ, ಭಾರತಪುಳ ನದಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಆತನನ್ನು ಪತ್ತೆ ಹಚ್ಚುವ ಕಾರ್ಯ ಮುಂದುವರೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಡಿವೈಡರ್‌ಗೆ ಕಾರು ಡಿಕ್ಕಿ- ಡಿವೈಡರ್ ಮೇಲೆ ನಿಂತಿದ್ದ ಇಬ್ಬರು ಕಾರ್ಮಿಕರು ಸಾವು
ಶೊರನೂರ್ ಸೇತುವೆ ಬಳಿ ರೈಲ್ವೆ ಹಳಿಯಿಂದ ಕಸವನ್ನು ತೆರವುಗೊಳಿಸುತ್ತಿದ್ದ ಕಾರ್ಮಿಕರಿಗೆ ಮಧ್ಯಾಹ್ನ 3:05ರ ಸುಮಾರಿಗೆ ನವದೆಹಲಿ-ತಿರುವನಂತಪುರ ರೈಲು ಡಿಕ್ಕಿ ಹೊಡೆದಿದೆ. ಕಾರ್ಮಿಕರು ರೈಲು (Train) ಬರುವುದನ್ನು ಗಮನಿಸದೇ ಇದ್ದುದರಿಂದ ಈ ಘಟನೆ ಸಂಭವಿಸಿರಬಹುದು. ಇದರ ಬಗ್ಗೆ ಹೆಚ್ಚಿನ ತನಿಖೆಗಳು ನಡೆಯುತ್ತಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಗೃಹಿಣಿ ಆತ್ಮಹತ್ಯೆ