ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರ (Kushalnagar) ತಾಲ್ಲೂಕಿನ ಬಸವನಹಳ್ಳಿ ಹಾಡಿಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಆಟವಾಡುತ್ತಿದ್ದ ವೇಳೆ ಶಾಲೆಯ ಗೇಟ್ ಏಕಾಏಕಿ ಕುಸಿದು ಬಿದ್ದ ಪರಿಣಾಮ 4 ವರ್ಷದ ಮಗು ಮೃತಪಟ್ಟಿದೆ.
ಮೃತ ಮಗುವನ್ನು ಅಪೂರ್ವ ಎಂದು ಗುರುತಿಸಲಾಗಿದೆ. ಈಕೆ ಸತೀಶ್ ಮತ್ತು ಪವಿತ್ರ ದಂಪತಿಯ ಪುತ್ರಿಯಾಗಿದ್ದು, ಈ ದುರ್ಘಟನೆ ಕುಟುಂಬವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಇದನ್ನೂ ಓದಿ: ಪಾದಾಚಾರಿಗಳ ಮೇಲೆ ಹರಿದು ಪಲ್ಟಿಯಾದ ಮೈನಿಂಗ್ ಲಾರಿ – ಇಬ್ಬರು ದುರ್ಮರಣ


ಘಟನೆ ನಡೆದ ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದರೂ ಮಗುವನ್ನ ಉಳಿಸಲು ಸಾಧ್ಯವಾಗಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಈ ದುರ್ಘಟನೆಯಿಂದ ಬಸವನಹಳ್ಳಿ ಹಾಡಿಯಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದ್ದು, ಶಾಲಾ ಆವರಣದ ಸುರಕ್ಷತೆ ಕುರಿತು ಪ್ರಶ್ನೆಗಳು ಕೇಳಿಬರುತ್ತಿವೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕುಶಾಲನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸಚಿವ ಸ್ಥಾನ ಬಿಟ್ಟು ಪಕ್ಷದ ಕೆಲಸ ಮಾಡಿ ಅಂತ ಹೈಕಮಾಂಡ್ ಹೇಳಿದ್ರೆ ಎಲ್ಲರೂ ಮಾಡಬೇಕು: ಪ್ರಿಯಾಂಕ್ ಖರ್ಗೆ

