ಚಿತ್ರದುರ್ಗ: ಎದೆ ಉರಿ ಎಂದ ಬಾಲಕನನ್ನು (Boy) ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಹಿರಿಯೂರು (Hiriyur) ನಗರದಲ್ಲಿ ನಡೆದಿದೆ.
ಹಿರಿಯೂರು ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ ವೈಷ್ಣವ್ (4) ಮೃತ ಬಾಲಕ. ವೈಷ್ಣವ್ ತನಗೆ ಎದೆ ಉರಿಯುತ್ತಿದೆ ಎಂದು ಪೋಷಕರಿಗೆ ತಿಳಿಸಿದ್ದಾನೆ. ಕೂಡಲೇ ಪೋಷಕರು ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್, ಮೈತ್ರಿಪಕ್ಷಗಳ ನಡುವೆ ಬಿಡದಿ ಟೌನ್‌ಶಿಪ್ ಜಟಾಪಟಿ – ಪೋಸ್ಟರ್ ವಾರ್
ಆದರೆ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಬಾಲಕ ವೈಷ್ಣವ್ ಕೊನೆಯುಸಿರೆಳೆದಿದ್ದಾನೆ. ಹೃದಯಾಘಾತದಿಂದ (Heart Attack) ಬಾಲಕ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಕೋಲಾರ | ಪ್ರೀತಿಸಿ ಮದುವೆಯಾದ ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ
