ಭೋಪಾಲ್: ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ನಂತರ ಕಬ್ಬಿನ ಗದ್ದೆಯಲ್ಲಿ ಎಸೆದು ಹೋಗಿರುವ ಘಟನೆ ಮಧ್ಯಪ್ರದೇಶದ (Madhya Pradesh) ಖಾಂಡ್ವಾ (Khandwa) ಜಿಲ್ಲೆಯಲ್ಲಿ ನಡೆದಿದೆ.
ಸೋಮವಾರ ಗದ್ದೆಯ ಪೊದೆಗಳಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಾಲಕಿ ಪತ್ತೆಯಾಗಿದ್ದು, ಇಂದೋರ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸೋಮವಾರ ಬೆಳಗ್ಗೆ ಜಸ್ವಾಡಿಯಲ್ಲಿರುವ ಸಂಬಂಧಿಕರ ಮನೆಯಿಂದ ಬಾಲಕಿ ಕಾಣೆಯಾಗಿದ್ದಳು. ನಂತರ ಈ ಬಗ್ಗೆ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಬಾಲಕಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದರು.
Advertisement
Advertisement
ತನಿಖೆ ವೇಳೆ, ಉಪಾಹಾರ ಗೃಹದಲ್ಲಿ ಕೆಲಸ ಮಾಡುತ್ತಿದ್ದ 25 ವರ್ಷದ ಯುವಕನ ಮೇಲೆ ಅನುಮಾನ ಹೊಂದಿದ್ದರು. ಈತ ಭಾನುವಾರ ರಾತ್ರಿ ಬಾಲಕಿಯ ಕುಟುಂಬಸ್ಥರಿಗೆ ಬೆಡ್ ಶೀಟ್ ಖರೀದಿಸುವಂತೆ ಒತ್ತಾಯಿಸಿದ್ದನು. ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ವಿಚಾರಣೆ ನಡೆಸಿದ ವೇಳೆ ಆರೋಪಿ ಬಾಲಕಿಯನ್ನು ಗದ್ದೆಗೆ ಕರೆದೊಯ್ದು ಅತ್ಯಾಚಾರವೆಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.
Advertisement
Advertisement
ಈ ಮಾಹಿತಿಯನ್ನು ಆಧರಿಸಿ, ಪರಿಶೀಲನೆ ನಡೆಸಿದ ಪೊಲೀಸರಿಗೆ ನಾಪತ್ತೆಯಾಗಿದ್ದ ಬಾಲಕಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಆರಂಭದಲ್ಲಿ ಬಾಲಕಿಯನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ನಂತರ ಇಂದೋರ್‌ಗೆ ಸ್ಥಳಾಂತರಿಸಲಾಯಿತು ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‍ಪಿ) ವಿವೇಕ್ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ದಿ. ಪುನೀತ್‍ಗೆ ಕರ್ನಾಟಕ ರತ್ನ ಪ್ರಶಸ್ತಿ- ಮನೆ ಮನೆಗೆ ಕನ್ನಡ ಧ್ವಜ ಫ್ರೀ
ಬಾಲಕಿ ಮಲಗಿದ್ದ ವೇಳೆ ಆಕೆಯನ್ನು ಅಪಹರಿಸಿ ಗದ್ದೆಗೆ ಕರೆದೊಯ್ದು ಅತ್ಯಾಚಾರ ಎಸಗಿ ನಂತರ ಪೊದೆಯೊಂದಕ್ಕೆ ಎಸೆದು ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಸದ್ಯ ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ನಕ್ಷತ್ರದ ಕಣ್ಣುಗಳಿರುವ ಅಪ್ಪು ದೇವರ ಮಗು ಎಂದು ಹಾಡಿ ಹೊಗಳಿದ ರಜನಿಕಾಂತ್