ಬೆಂಗಳೂರು: ಅಸೆಂಬ್ಲಿ ಚುನಾವಣೆಗೆ ಆರು ತಿಂಗಳಿರುವಾಗಲೇ ರಾಜ್ಯ ರಾಜಕೀಯ ಕಾವೇರಿದೆ. ಬಿಜೆಪಿ (BJP) ಸರ್ಕಾರದ ವಿರುದ್ಧ 40% ಕಮೀಷನ್ ಆರೋಪ ಮಾಡ್ತಿರುವ ಕಾಂಗ್ರೆಸ್ (Congress), ಈ ವಿಚಾರದಲ್ಲಿ ದಿನಕ್ಕೊಂದು ಅಸ್ತ್ರ ಪ್ರಯೋಗಿಸಿ ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಲು ಪ್ರಯತ್ನ ನಡೆಸಿದೆ. ಇಂದು ಯುಪಿಐ ಪೇಮೆಂಟ್ (UPI Payment) ಆಪ್ `ಪೇಟಿಎಂ” ಮಾದರಿಯಲ್ಲಿ `ಪೇ ಸಿಎಂ’ (PayCM) Poster ಪೋಸ್ಟರ್‌ಗಳನ್ನು ಅಂಟಿಸಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಚಾಟಿ ಬೀಸಿದೆ. ಇತ್ತ ಪೋಸ್ಟರ್ ಅಭಿಯಾನವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಜೆಪಿ ಸರ್ಕಾರ ಪೋಸ್ಟರ್ ಅಂಟಿಸಿದ ಪ್ರಕರಣವನ್ನು ಸಿಸಿಬಿಗೆ (CCB) ವರ್ಗಾಯಿಸಿದೆ.
Advertisement
ಉದ್ಯೋಗಾಕಾಂಕ್ಷಿಗಳನ್ನು ಮುಂದಿಟ್ಟುಕೊಂಡು ಲಂಚ ತಗೊಳಿ. ಕೆಲಸ ಕೊಡಿ ಅಭಿಯಾನ ನಡೆಸಿದ್ದ ಕಾಂಗ್ರೆಸ್, ಇದೀಗ ಯುಪಿಐ ಪೇಮೆಂಟ್ ಆಪ್ `ಪೇಟಿಎಂ” ಮಾದರಿಯಲ್ಲಿ `ಪೇ ಸಿಎಂ’ ಪೋಸ್ಟರ್‌ಗಳನ್ನು ಸಿಎಂ ಓಡಾಡೋ ಕಡೆ ಅಂಟಿಸಿದೆ. ಸಿಎಂ ಬೊಮ್ಮಾಯಿ ಫೋಟೋ ಒಳಗೊಂಡಿರುವ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿದ್ರೇ, ಇತ್ತೀಚಿಗಷ್ಟೇ ಕಾಂಗ್ರೆಸ್ ಆರಂಭಿಸಿದ್ದ `40% ಪರ್ಸೆಂಟ್ ಸರ್ಕಾರ್’ ವೆಬ್‍ಸೈಟ್ ಓಪನ್ ಆಗುತ್ತದೆ. ಸರ್ಕಾರದ ಭ್ರಷ್ಟಾಚಾರಗಳ ಬಗ್ಗೆ ಈ ವೆಬ್‍ಸೈಟ್‍ನಲ್ಲಿ ದೂರು ಕೂಡ ನೀಡಬಹುದಾಗಿದೆ. `ಪೇ ಸಿಎಂ’ ಪೋಸ್ಟರ್‌ಗಳು ಸೋಷಿಯಲ್ ಮೀಡಿಯಾದಲ್ಲಿಯೂ ವೈರಲ್ ಆಗಿದೆ. ಕೇವಲ ಒಂದೇ ದಿನದಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚು ಮಂದಿ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿದ್ದಾರೆ. ಈ ಬೆಳವಣಿಗೆ ಆಡಳಿತ ಪಕ್ಷವನ್ನು ತೀವ್ರ ಮುಜುಗರಕ್ಕೀಡುಮಾಡಿದೆ. ನಗರದ ಹತ್ತಕ್ಕೂ ಹೆಚ್ಚು ಕಡೆ ಪೋಸ್ಟರ್‌ಗಳನ್ನು ಕಿಡಿಗೇಡಿಗಳು ಅಂಟಿಸಿದ್ದರು. ಈ ಸಂಬಂಧ ಹಲವು ಠಾಣೆಗಳಲ್ಲಿ ಎಫ್.ಐ.ಆರ್ ದಾಖಲಾಗಿತ್ತು. ಇದನ್ನೂ ಓದಿ: ಭ್ರಷ್ಟಾಚಾರ ಮುಗಿಸಲು ನಾವು ಬಂದಿದ್ದೇವೆ – ಬಿಜೆಪಿ, ಕಾಂಗ್ರೆಸ್ ನಡುವೆ ವಾಕ್ಸಮರ
Advertisement
Advertisement
ಸದಾಶಿವನಗರ, ಹೈಗ್ರೌಂಡ್ಸ್, ಶೇಷಾದ್ರಿಪುರಂ, ಭಾರತೀನಗರ ಸೇರಿದಂತೆ ಐದಕ್ಕೂ ಹೆಚ್ಚು ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ಈ ಎಲ್ಲಾ ಪ್ರಕರಣಗಳನ್ನು ಸಿಸಿಬಿಗೆ ವರ್ಗಾಯಿಸಿ ತನಿಖೆಗೆ ಆದೇಶಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶಸಿದ್ದು, ಪ್ರಕರಣ ವರ್ಗಾವಣೆ ಆಗುತ್ತಿದ್ದಂತೆ ಸಿಸಿಬಿ ಪೊಲೀಸರು ಮಾಹಿತಿ ಪಡೆದಿದ್ದಾರೆ. ಇದನ್ನೂ ಓದಿ: PayCM ಪೋಸ್ಟರ್‌ಗೆ ಸಿಎಂ ಗರಂ – ಎಫ್‌ಐಆರ್ ದಾಖಲು
Advertisement
ಇಂದು ಬೆಳಗ್ಗೆ ಪೇ ಸಿಎಂ ಮಾಧ್ಯಮಗಳಲ್ಲಿ ವರದಿ ಆಗುತ್ತಲೇ ಸಿಎಂ ಬೊಮ್ಮಾಯಿ (Basavaraj Bommai) ಗರಂ ಆಗಿದ್ದಾರೆ. ಗುಪ್ತಚರ ಪಡೆ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಏನ್ ಮಾಡ್ತಿದ್ದೀರಾ. ಇದು ನಿಮ್ಮ ಗಮನಕ್ಕೆ ಬರಲಿಲ್ವಾ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಬೆನ್ನಲ್ಲೇ ಪೊಲೀಸರು, ಬಿಬಿಎಂಪಿ ಸಿಬ್ಬಂದಿ `ಪೇ ಸಿಎಂ’ ಪೋಸ್ಟರ್‌ಗಳನ್ನು ಹರಿಯೋ ಕೆಲಸ ಶುರು ಮಾಡ್ಕೊಂಡಿದ್ದಾರೆ. ಸಾರ್ವಜನಿಕ ಆಸ್ತಿ ನಾಶ, ನಗರದ ಸೌಂದರ್ಯಕ್ಕೆ ಅಡ್ಡಿ ಮಾಡಿದ ಆರೋಪದಡಿ ಪೊಲೀಸರು ಐದು ಕಡೆ ಕೇಸ್ ದಾಖಲಿಸಿಕೊಂಡಿದ್ದಾರೆ. ಪೋಸ್ಟರ್ ಅಂಟಿಸಿದವರ ಪತ್ತೆಗೆ ಮುಂದಾಗಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಗಂಜಿ ಗಿರಾಕಿಗಳಿಂದ ದೂರವಿರಿ – ಬಿಜೆಪಿಯಿಂದ ರಿಡೂ ಸಿದ್ದರಾಮಯ್ಯ, ಇಡಿ ಡಿಕೆಶಿ ಅಭಿಯಾನ