ಕುವೈತ್ ಅಗ್ನಿ ದುರಂತದಲ್ಲಿ 40 ಮಂದಿ ಭಾರತೀಯರ ದುರ್ಮರಣ – ಮೋದಿ ಸಂತಾಪ

Public TV
2 Min Read
Kuwait Labour Camp Fire Modi

ಕುವೈತ್: ಇಲ್ಲಿನ ಕಾರ್ಮಿಕರ ಶಿಬಿರದಲ್ಲಿ (Labour Camp) ಸಂಭವಿಸಿದ ಅಗ್ನಿ ಅವಘಡದಲ್ಲಿ (Fire Accident) ಸಾವನ್ನಪ್ಪಿದ 40 ಮಂದಿ ಭಾರತೀಯರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಸಂತಾಪ ಸೂಚಿಸಿದ್ದಾರೆ.

ಕುವೈತ್ (Kuwait) ಅಗ್ನಿ ದುರಂತದ ಕುರಿತು ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪದ ನುಡಿಗಳನ್ನು ಹಂಚಿಕೊಂಡಿದ್ದಾರೆ. ಕುವೈತ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡ ಅತ್ಯಂತ ದುಃಖಕರವಾಗಿದೆ. ದುರಂತದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬದವರೊಂದಿಗೆ ನಾವಿದ್ದೇವೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಸಂತ್ರಸ್ತರಿಗೆ ಸಹಾಯ ಮಾಡಲು ಅಲ್ಲಿನ ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕುವೈತ್‌ನ ಕಾರ್ಮಿಕರ ಶಿಬಿರದಲ್ಲಿ ಅಗ್ನಿ ದುರಂತ – 40 ಮಂದಿ ಭಾರತೀಯರು ಸಾವು

ಘಟನೆ ಏನು?
ಕುವೈತ್‌ನ ಮಂಗಾಫ್ ನಗರದಲ್ಲಿ ಕಾರ್ಮಿಕರ ಶಿಬಿರದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 40 ಮಂದಿ ಭಾರತೀಯರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 43ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್‌; ಸೇನಾ ದಾಳಿಗೆ ಇಬ್ಬರು ಉಗ್ರರು ಬಲಿ

ಘಟನೆಯ ಕುರಿತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಕುವೈತ್ ನಗರದಲ್ಲಿ ಅಗ್ನಿ ದುರಂತದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. 40ಕ್ಕೂ ಹೆಚ್ಚು ಸಾವುಗಳು ಸಂಭವಿಸಿದ್ದು, 50ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ನಮ್ಮ ರಾಯಭಾರಿ ಶಿಬಿರಕ್ಕೆ ಹೋಗಿದ್ದಾರೆ. ನಾವು ಹೆಚ್ಚಿನ ಮಾಹಿತಿಗಾಗಿ ಕಾಯುತ್ತಿದ್ದೇವೆ ಎಂದು ಜೈಶಂಕರ್ ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ ಮಗ ತಪ್ಪು ಮಾಡಿಲ್ಲ, ಯಾರೋ ಪಿತೂರಿ ಮಾಡಿದ್ದಾರೆ: ರೇಣುಕಾಸ್ವಾಮಿ ಕೊಲೆ ಕೇಸ್‌ ಎ3 ಆರೋಪಿ ತಾಯಿ

Share This Article