– 8 ಜನರ ಸ್ಥಿತಿ ಗಂಭೀರ
ಇಸ್ಲಾಮಾಬಾದ್: ಬಲೂಚಿಸ್ತಾನ್ (Baluchistan) ಪ್ರಾಂತ್ಯದಲ್ಲಿ ಭೀಕರ ರಸ್ತೆ ಅಪಘಾತ(Bus Accident) ಸಂಭವಿಸಿದ್ದು, ಆಳವಾದ ಕಂದಕಕ್ಕೆ ಬಸ್ ಉರುಳಿದ ಪರಿಣಾಮ 40 ಮಂದಿ ಸಾವನ್ನಪ್ಪಿದ್ದು, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕ್ವೆಟ್ಟಾದಿಂದ ಇಸ್ಲಾಮಾಬಾದ್‌ಗೆ ತೆರಳುತ್ತಿದ್ದ ಪ್ರಯಾಣಿಕರ ಬಸ್, ಶೆರಾನಿ-ಝೋಬ್ ಹೆದ್ದಾರಿಯ ದನಾಸರ್ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿದೆ. ಅಪಘಾತ ಸಂಭವಿಸಿದ ವೇಳೆ ಬಸ್‌ನಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಪ್ರಯಾಣಿಕರಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ತಿಳಿಯುತ್ತಿದ್ದಂತೆ ವೈದ್ಯಕೀಯ ತುರ್ತು ಪ್ರತಿಕ್ರಿಯೆ ಕೇಂದ್ರ, ಪೊಲೀಸರು ಹಾಗೂ ಜಿಲ್ಲಾಡಳಿತ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಹಲವಾರು ಗಂಟೆಗಳ ಕಾರ್ಯಾಚರಣೆ ಬಳಿಕ ಕಂದಕಕ್ಕೆ ಬಿದ್ದಿದ್ದ ಬಸ್‌ನಿಂದ 40 ಮೃತದೇಹಗಳನ್ನು ಹೊರತೆಗೆಯಲಾಯಿತು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.ಇದನ್ನೂ ಓದಿ: 40 ವರ್ಷಗಳ ಬಳಿಕ ಭಾರತೀಯ ಪ್ರಧಾನಿ ಐತಿಹಾಸಿಕ ಭೇಟಿ – ಮುಂದಿನ ವಾರ ನ್ಯೂಜಿಲೆಂಡ್‌ಗೆ ಮೋದಿ ಪ್ರವಾಸ
ಬಸ್ ಆರಂಭದಲ್ಲಿ 36 ಪ್ರಯಾಣಿಕರೊಂದಿಗೆ ಕ್ವೆಟ್ಟಾದಿಂದ ಹೊರಟಿತ್ತು. ಬಳಿಕ ಮಾರ್ಗ ಮಧ್ಯೆ ಕೆಟ್ಟು ನಿಂತಿದ್ದ ಮತ್ತೊಂದು ಬಸ್‌ನ ಪ್ರಯಾಣಿಕರನ್ನೂ ಇದೇ ಬಸ್‌ಗೆ ಹತ್ತಿಸಲಾಗಿತ್ತು. ಇದರಿಂದ ಬಸ್‌ನಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿ, ಬಸ್ ಓವರ್‌ಲೋಡ್ ಆಗಿತ್ತು ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ಬಸ್ ಓವರ್‌ಲೋಡ್ ಆಗಿದ್ದಲ್ಲದೇ, ಅಪಾಯಕಾರಿ ಪರ್ವತ ರಸ್ತೆಯಲ್ಲಿ ಸಂಚರಿಸುತ್ತಿದ್ದುದೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಆದರೆ, ಅಪಘಾತದ ನಿಖರ ಕಾರಣ ತಿಳಿಯಲು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.ಇದನ್ನೂ ಓದಿ: ಖಮೇನಿ ಅಂತ್ಯಕ್ರಿಯೆಗೆ ಮಗ ಮೊಜ್ತಬಾ ಹೋಗಲ್ಲ – ಭಾರತದಿಂದ ಭಾಗವಹಿಸೋದ್ಯಾರು?
