ಡಾಕರ್: ಭೀಕರ ಬಸ್ ಅಪಘಾತದಲ್ಲಿ (Bus Crash) 40 ಮಂದಿ ದುರ್ಮರಣಕ್ಕೀಡಾಗಿದ್ದು, ಹಲವರು ಗಾಯಗೊಂಡಿರುವ ದಾರುಣ ಘಟನೆ ಕೇಂದ್ರ ಸೆನೆಗಲ್‌ನಲ್ಲಿ (Senegal) ಭಾನುವಾರ ನಡೆದಿದೆ.
ಸಾರ್ವಜನಿಕ ಬಸ್‌ವೊಂದರ ಟೈರ್ ಪಂಕ್ಚರ್ ಆಗಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಬಸ್‌ಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಕನಿಷ್ಠ 78 ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಚೀನಾದಲ್ಲಿ ಭೀಕರ ರಸ್ತೆ ಅಪಘಾತ – 19 ಮಂದಿ ಬಲಿ
Advertisement
Je suis profondément attristé par le tragique accident routier de ce jour, à Gniby, occasionnant 40 morts et de nombreux blessés graves. J’adresse mes condoléances émues aux familles des victimes et souhaite prompt rétablissement aux blessés.
— Macky Sall (@Macky_Sall) January 8, 2023
Advertisement
ಕಾಫ್ರಿನ್ ಪ್ರದೇಶದ ಗ್ನಿವಿ ಗ್ರಾಮದಲ್ಲಿ ಮುಂಜಾನೆ ವೇಳೆ ಈ ಅಪಘಾತ ಸಂಭವಿಸಿದೆ ಎಂದು ಅಧ್ಯಕ್ಷ ಮ್ಯಾಕಿ ಸಾಲ್ (Macky Sall) ಟ್ವೀಟ್‌ನಲ್ಲಿ ತಿಳಿಸಿದ್ದಾರೆ. “ಇಂದು ಗ್ನಿಬಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 40 ಜನರು ಮೃತಪಟ್ಟಿದ್ದು, ಅನೇಕರು ಗಾಯಗೊಂಡಿದ್ದಾರೆ. ಈ ದುರಂತ ಘಟನೆಯಿಂದ ತೀವ್ರ ದುಃಖಿತನಾಗಿದ್ದೇನೆ. ಸಂತ್ರಸ್ತರ ಕುಟುಂಬಗಳಿಗೆ ನನ್ನ ಸಂತಾಪ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ. ಅವರಿಗೆ ಅಗತ್ಯ ವೈದ್ಯಕೀಯ ನೆರವು ಒದಗಿಸಲಾಗುವುದು” ಎಂದು ತಿಳಿಸಿದ್ದಾರೆ.
Advertisement
ಸೋಮವಾರದಿಂದ ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಿದ ಅವರು, ರಸ್ತೆ ಸುರಕ್ಷತಾ ಕ್ರಮಗಳ ಕುರಿತು ಚರ್ಚಿಸಲು ಸಭೆ ನಡೆಸುವುದಾಗಿ ಮ್ಯಾಕಿ ಸಾಲ್ ಹೇಳಿದ್ದಾರೆ. ಕಳಪೆ ಗುಣಮಟ್ಟದ ರಸ್ತೆಗಳು, ಚಾಲಕರು ನಿಯಮಗಳನ್ನು ಪಾಲಿಸದ ಕಾರಣ ಪಶ್ಚಿಮ ಆಫ್ರಿಕಾದ ರಾಷ್ಟ್ರದಲ್ಲಿ ಮೋಟಾರ್ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿವೆ ಎಂದು ಸ್ಥಳೀಯರು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಶಾಲೆ ಬಿಟ್ಟು ಬೀಡಿ ಕಟ್ಟುವ ಕೆಲಸ ಮಾಡುತ್ತಿದ್ದ ವ್ಯಕ್ತಿ ಅಮೆರಿಕದ ಜಡ್ಜ್
Advertisement
2017ರಲ್ಲಿ, ಎರಡು ಬಸ್‌ಗಳು ಅಪಘಾತಕ್ಕೀಡಾಗಿ ಕನಿಷ್ಠ 25 ಜನರು ಸಾವನ್ನಪ್ಪಿದ್ದರು. ಅವರಲ್ಲಿ ಅನೇಕರು ತೀರ್ಥಯಾತ್ರೆಗಾಗಿ ಕೇಂದ್ರ ಪಟ್ಟಣವಾದ ತೌಬಾ ಕಡೆಗೆ ಹೋಗುತ್ತಿದ್ದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k