ನವದೆಹಲಿ: ಐಫೋನ್‌ಗಳನ್ನು ಆಮದು ಮಾಡಿಕೊಳ್ಳುವ ಕಾಲ ಹೋಗಿದ್ದು ಈಗ ರಫ್ತು ಮಾಡುವ ಕಾಲ ಬಂದಿದೆ. 2022-23ರ ಹಣಕಾಸು ವರ್ಷದಲ್ಲಿನ ಮೊಬೈಲ್ ರಫ್ತುಗಳ ಪೈಕಿ ಐಫೋನ್(iPhone) ಪಾಲು ಶೇ.40 ರಷ್ಟಿದೆ ಎಂದು ನೀತಿ ಆಯೋಗದ ಮಾಜಿ ಸಿಇಒ, ಜಿ20 ಶೆರ್ಪಾ ಅಮಿತಾಬ್ ಕಾಂತ್(Amitabh Kant) ತಿಳಿಸಿದ್ದಾರೆ.
Way to go! Thanks to PLI Scheme, India crossed ₹50,000 CR export mark during Apr -Nov,2022 – up 110% compared to same pd last year. Main contributors are three Apple manufacturers- Foxconn, Pegatron & Wistron & Samsung. 40% worth of smartphones exported from India are iPhones.
— Amitabh Kant (@amitabhk87) December 22, 2022
Advertisement
2022 ರ ಏಪ್ರಿಲ್-ನವೆಂಬರ್ ಅವಧಿಯಲ್ಲಿ ಭಾರತದ ಮೊಬೈಲ್ ರಫ್ತು(Mobile Exports) 50,000 ಕೋಟಿ ರೂ. ದಾಟಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ರಫ್ತು 110 ಪಟ್ಟು ಹೆಚ್ಚಾಗಿದೆ. ಆಪಲ್ ಐಫೋನ್ ತಯಾರಿಸುವ ಫಾಕ್ಸ್‌ಕಾನ್, ಪೆಗಾಟ್ರಾನ್, ವಿಸ್ಟ್ರಾನ್ ಮತ್ತು ಸ್ಯಾಮ್‌ಸಂಗ್‌ನಿಂದ ಇದು ಸಾಧ್ಯವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಂಗ್ಳೂರು ಬಳಿ ಟಾಟಾ ಐಫೋನ್ ಉತ್ಪಾದನಾ ಘಟಕ – 60 ಸಾವಿರ ಮಂದಿಗೆ ಉದ್ಯೋಗ
Advertisement
Advertisement
ಆತ್ಮನಿರ್ಭರ್ ಯೋಜನೆಯ ಭಾಗವಾಗಿ ಕೇಂದ್ರ ಸರ್ಕಾರ ಭಾರತದ ತಯಾರಕರನ್ನು ಜಾಗತಿಕವಾಗಿ ಸ್ಪರ್ಧಾತ್ಮಕವಾಗಿಸಲು, ಹೂಡಿಕೆಗಳನ್ನು ಆಕರ್ಷಿಸಿ ರಫ್ತುಗಳನ್ನು ಹೆಚ್ಚಿಸಲು, ಜಾಗತಿಕ ಪೂರೈಕೆ ಸರಪಳಿಯಲ್ಲಿ ಭಾರತವನ್ನು ಸಂಯೋಜಿಸಲು ಮತ್ತು ಆಮದುಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು 14 ವಲಯಗಳಲ್ಲಿ ಉತ್ಪಾದನೆ ಆಧಾರಿತ ಪ್ರೋತ್ಸಾಹಧನ(Production Linked Incentive) ಯೋಜನೆ ಪ್ರಾರಂಭಿಸಿದೆ. ಇದನ್ನೂ ಓದಿ: ಐಫೋನ್ ಫ್ಯಾಕ್ಟರಿಯಲ್ಲಿ ಘರ್ಷಣೆ – ಲಾಕ್‌ಡೌನ್ ವಿಸ್ತರಿಸಿದ ಚೀನಾ
Advertisement
ಮಂಗಳವಾರ ಕೇಂದ್ರ ಸರ್ಕಾರ ಪಿಎಲ್‌ಐ ಅಡಿ ಫಾಕ್ಸ್‌ಕಾನ್ ಇಂಡಿಯಾ ಮತ್ತು ಪ್ಯಾಜೆಟ್ ಎಲೆಕ್ಟ್ರಾನಿಕ್ಸ್ ಕಂಪನಿಗಳಿಗೆ ಕ್ರಮವಾಗಿ 357.17 ಕೋಟಿ ರೂ. ಮತ್ತು 58.29 ಕೋಟಿ ರೂ. ಪ್ರೋತ್ಸಾಹಧನ ನೀಡಲು ಸರ್ಕಾರ ಅನುಮೋದಿಸಿದೆ. ಇದನ್ನೂ ಓದಿ: ಚೀನಾಗೆ ಸ್ಯಾಮ್‍ಸಂಗ್ ಶಾಕ್ – ನೋಯ್ಡಾಕ್ಕೆ ಡಿಸ್‍ಪ್ಲೇ ಘಟಕ ಸ್ಥಳಾಂತರ
ಭಾರತವನ್ನು ಮೊಬೈಲ್ ಉತ್ಪಾದನಾ ಹಬ್ ದೇಶವನ್ನಾಗಿ ಪರಿವರ್ತಿಸಲು ಕೇಂದ್ರ ಸರ್ಕಾರ ಉತ್ಪಾದನೆ ಆಧಾರಿತ ಪ್ರೋತ್ಸಾಹ (ಪಿಎಲ್‍ಐ) ಯೋಜನೆಯನ್ನು 2021 ರಿಂದ ಆರಂಭಿಸಿದೆ. ಉದ್ಯೋಗ ಸೃಷ್ಟಿಗಾಗಿ ಆರಂಭಿಸಲಾದ ಈ ಯೋಜನೆ ಅಡಿ ಮುಂದಿನ 5 ವರ್ಷದಲ್ಲಿ 1.5 ಲಕ್ಷ ಕೋಟಿ ಮೌಲ್ಯದ ಮೊಬೈಲ್ ಫೋನ್ ಹಾಗೂ ಬಿಡಿಭಾಗಗಳನ್ನು ಉತ್ಪಾದಿಸುವ ಗುರಿಯನ್ನು ಹಾಕಿಕೊಳ್ಳಲಾಗಿದೆ. ಪಿಎಲ್‍ಐ ಯೋಜನೆ ಅಡಿ ಲಾಭ ಪಡೆದುಕೊಳ್ಳಲು ದೇಶದ ಮತ್ತು ವಿಶ್ವದ ಹಲವು ಕಂಪನಿಗಳು ಆಯ್ಕೆಯಾಗಿವೆ.