ಬೆಂಗಳೂರು: ರಾಜ್ಯದಲ್ಲಿ ಮತ್ತೆ 40% ಕಮೀಷನ್ ಆರೋಪ ಜೀವ ಪಡೆದುಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಸುತ್ತಿನ ಹೋರಾಟಕ್ಕೆ ಗುತ್ತಿಗೆದಾರರ ಸಂಘ ಮುಂದಾಗಿದೆ.
ಈ ಬಗ್ಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾತನಾಡಿ, ಒಂದು ವರ್ಷ 2 ತಿಂಗಳಿಂದ ಹೋರಾಟ ಮಾಡುತ್ತಿದ್ದೇವೆ. ಸಿಎಂ ಮಾತಿಗೂ ಬೆಲೆ ಇಲ್ಲದಂತಾಗಿದೆ. ಮಾನ, ಮರ್ಯಾದೆ ಇಲ್ವಾ ಜನ ಪ್ರತಿನಿಧಿಗಳು ಇವರು. ಇನ್ನೂ 22 ಸಾವಿರ ಕೋಟಿ ಬಿಲ್ ಪೆಂಡಿಂಗ್ ಇದೆ. ಕೆಲವರದು 3 ವರ್ಷಗಳಿಂದ ಬಾಕಿ ಇದೆ. ನನ್ನ ಜೀವನದಲ್ಲಿ ನೋಡಿದ ಅತ್ಯಂತ ಭ್ರಷ್ಟ ಸರ್ಕಾರ ಇದಾಗಿದೆ. ಇದರಲ್ಲಿ ಬೊಮ್ಮಾಯಿ ಸೇರಿದಂತೆ ಎಲ್ಲರೂ ಇದ್ದಾರೆ. ಯಾರಿಗೂ ರ‍್ಯಾಂಕಿಂಗ್ ಕೊಡೋಕೆ ಆಗಲ್ಲ ಎಂದು ಆರೋಪಿಸಿದರು.
Advertisement
Advertisement
ಪ್ರಧಾನಿ ನರೇಂದ್ರ ಮೋದಿಗೆ ಮತ್ತೊಂದು ಪತ್ರ ಬರೆಯಲು ಮುಂದಾಗಿದ್ದೇವೆ. ಸ್ವಾತಂತ್ರ್ಯ ದಿನಾಚರಣೆ ವೇಳೆ ಮೋದಿ ಅವರು ಭ್ರಷ್ಟಾಚಾರದ ಬಗ್ಗೆ ಪ್ರಸ್ತಾಪ ಮಾಡಿದ್ದರು. ದೇಶಕ್ಕೆ ಭ್ರಷ್ಟಾಚಾರ ದೊಡ್ಡ ಮಾರಕ, ಶತ್ರು ಎಂದಿದ್ದರು. ಮೋದಿ ಮಾತನ್ನು ಉಲ್ಲೇಖಿಸಿ ಅಭಿನಂದನೆ ಪತ್ರ ಬರೆಯಲು ಮುಂದಾಗಿದ್ದೇವೆ. ಜೊತೆಗೆ ಒಂದೂವರೆ ವರ್ಷವಾದರೂ ಗುತ್ತಿಗೆದಾರರು ನೀಡಿರುವ ದೂರಿಗೆ ಯಾವ ಕ್ರಮಕೈಗೊಂಡಿದ್ದೀರಿ ಎಂಬುದನ್ನೂ ಪ್ರಸ್ತಾಪಿಸಲಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಉತ್ತರ ಪ್ರದೇಶ ಮಾದರಿಯಲ್ಲಿ ಕರ್ನಾಟಕದಲ್ಲೂ ಜಾರಿಯಾಗುತ್ತಾ ಮದರಸಾ ಶಿಕ್ಷಣ ಮಂಡಳಿ?
Advertisement
Advertisement
ಇಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹಾಗೂ 30ಕ್ಕೂ ಹೆಚ್ಚಿನ ಸದಸ್ಯರು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ಈ ವೇಳೆ ಬಗ್ಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ನಾವು ಎಲ್ಲಾ ಮಾಹಿತಿ ಕೊಟ್ಟಿದ್ದೇವೆ. ಸದನದಲ್ಲಿ ಅದನ್ನ ಪ್ರಸ್ತಾಪಿಸುತ್ತೇನೆ ಎಂದಿದ್ದಾರೆ ಎಂದು ಭರವಸೆ ನೀಡಿದ್ದಾರೆ. ಆದರೆ ನಾನು ಯಾವುದೇ ದಾಖಲೆಗಳನ್ನ ಸಿದ್ದರಾಮಯ್ಯಗೆ ಕೊಟ್ಟಿಲ್ಲ. ನ್ಯಾಯಾಂಗ ತನಿಖೆ ಮಾಡಿದರೆ ಮಾತ್ರ ದಾಖಲೆ ಕೊಡುತ್ತೇವೆ. ದಾಖಲೆಯನ್ನು ನಾನು ಬಹಿರಂಗ ಪಡಿಸಿದರೆ ಗುತ್ತಿಗೆದಾರರಿಗೆ ತೊಂದರೆ ಆಗುತ್ತದೆ ಎಂಬ ಭಯ ಇದೆ ಎಂದರು. ಇದನ್ನೂ ಓದಿ: ಬೆಳಗಾವಿಯ ಚಿರತೆ ಸೆರೆಗೆ ಶಿವಮೊಗ್ಗದ ಸಕ್ರೆಬೈಲಿನಿಂದ ಅರ್ಜುನ್, ಆಲೆ ಆಗಮನ