ಚಿಕ್ಕೋಡಿ: ಮಹಾರಾಷ್ಟ್ರದ (Maharastra Rain) ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಕೃಷ್ಣಾ ನದಿ (Krishna River) ನೀರಿನ ಪ್ರಮಾಣ ಕ್ಷಣದಿಂದ ಕ್ಷಣಕ್ಕೆ ಏರಿಕೆಯಾಗುತ್ತಿದೆ.
ಕೃಷ್ಣಾ ನದಿಗೆ 25 ಸಾವಿರ ಕ್ಯುಸೆಕ್‌ಗಿಂತಲೂ ಹೆಚ್ಚಿನ ಒಳ ಹರಿವು ಇದ್ದು ಹಿಪ್ಪರಗಿ ಜಲಾಶಯದಿಂದ (Hipparagi Dam) 40 ಸಾವಿರ ಕ್ಯುಸೆಕ್ ನೀರನ್ನು ಹೊರ ಬಿಡಲಾಗಿದೆ. ಇದನ್ನೂ ಓದಿ: ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆ – ಕೆಆರ್‌ಎಸ್‌ಗೆ ಹೆಚ್ಚಿದ ಒಳಹರಿವು
ಸದ್ಯಕ್ಕೆ ಯಾವುದೇ ಕೆಳ ಹಂತದ ಸೇತುವೆ ಮುಳುಗಡೆಯಾಗಿಲ್ಲ. ನೀರು ಜಾಸ್ತಿ ಆಗುತ್ತಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ನದಿಗೆ ಇಳಿಯದಂತೆ ಚಿಕ್ಕೋಡಿ ತಾಲೂಕಾಡಳಿತ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಧಾರಾಕಾರ ಮಳೆ – ಹೇಮಾವತಿ ಡ್ಯಾಂ ಒಳಹರಿವಿನಲ್ಲಿ ಭಾರೀ ಏರಿಕೆ
ನಿರಂತರ ಮಳೆಯಿಂದ ಕೊಲ್ಲಾಪುರದ ಪಂಚಗಂಗಾ ನದಿಯ (Panchganga River) ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಇದರಿಂದಾಗಿ ಪಂಚಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಹಲವು ಬ್ರಿಡ್ಜ್ ಕಮ್ ಬ್ಯಾರೇಜ್ ಮುಳುಗಡೆಯಾಗಿದೆ. ಮುಳುಗಡೆಯಾದ ಸೇತುವೆ ಮೇಲೆ ವಾಹಗಳ ಸಂಚಾರ ಸ್ಥಗಿತಗೊಳಿಸಿದ್ದು ಜಿಲ್ಲಾ ಆಡಳಿತ ಪೋಲಿಸರನ್ನು ನಿಯೋಜಿಸಿದೆ.