ನವದೆಹಲಿ: ಸೆಪ್ಟೆಂಬರ್ ಎರಡನೇ ವಾರದಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ (G20 Summit) ಭಾಗವಹಿಸಲು ಅಮೆರಿಕ ಅಧ್ಯಕ್ಷ ಜೋ ಬೈಡೆನ್ (Joe Biden) ಮತ್ತು ಇತರ ವಿಶ್ವ ನಾಯಕರು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆ ಇವರಿಗಾಗಿ ಹಲವಾರು ಹೋಟೆಲ್‌ಗಳನ್ನು (Hotel) ಮೀಸಲಿಡಲಾಗಿದೆ.
ಸೆಪ್ಟೆಂಬರ್ 9-10ರಂದು ದೆಹಲಿಯಲ್ಲಿ (Delhi) ಕಾರ್ಯಕ್ರಮ ನಡೆಯಲಿದ್ದು, ಇದರಲ್ಲಿ ಯುರೋಪಿಯನ್ ಒಕ್ಕೂಟದ ಉನ್ನತ ಅಧಿಕಾರಿಗಳು, 14 ಅಂತರಾಷ್ಟ್ರೀಯ ಸಂಸ್ಥೆಗಳು ಮತ್ತು ಅತಿಥಿ ರಾಷ್ಟ್ರಗಳ ಮುಖ್ಯಸ್ಥರು ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ ಅಧಿಕಾರಿಗಳು ಐಟಿಸಿ ಮೌರ್ಯ, ತಾಜ್ ಪ್ಯಾಲೆಸ್, ದಿ ಒಬೆರಾಯ್, ದಿ ಲೋಧಿ, ದಿ ಇಂಪೀರಿಯಲ್ ಮತ್ತು ಲೆ ಮೆರಿಡಿಯನ್ ಸೇರಿದಂತೆ ನವದೆಹಲಿಯ ಪ್ರಮುಖ ಹೋಟೆಲ್‌ಗಳಲ್ಲಿ ರೂಮ್‌ಗಳನ್ನು ಕಾಯ್ದಿರಿಸಲಾಗಿದೆ. ಇದನ್ನೂ ಓದಿ: ಸರ್ಕಾರಿ ಭೂಮಿ ಒತ್ತುವರಿ – ಪ್ರಕಾಶ್ ರಾಜ್‌ಗೆ ನೋಟಿಸ್
ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಮತ್ತು ಅವರ ಪರಿವಾರದ ಆತಿಥ್ಯಕ್ಕಾಗಿ ಐಟಿಸಿ ಮೌರ್ಯ ಹೋಟೆಲ್‌ನಲ್ಲಿ 400 ರೂಮ್ ಬುಕ್ ಮಾಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಹಿಂದೆ ಈ ಹೋಟೆಲಿನಲ್ಲಿ ಅಮೆರಿಕದ ಅಧ್ಯಕ್ಷರಾಗಿದ್ದ ಜಾರ್ಜ್ ಡಬ್ಲ್ಯು ಬುಷ್, ಬಿಲ್ ಕ್ಲಿಂಟನ್, ಬರಾಕ್ ಒಬಾಮ ಮತ್ತು ಇತರ ರಾಷ್ಟ್ರಗಳ ಮುಖ್ಯಸ್ಥರಿಗೆ ಆತಿಥ್ಯ ನೀಡಲಾಗಿತ್ತು. ಜಿ20 ಸಭೆ ಹಿನ್ನೆಲೆ ಭಾರತಕ್ಕೆ ಆಗಮಿಸುತ್ತಿರುವ ಜೋ ಬೈಡೆನ್ ಅವರ ಸುರಕ್ಷತೆಗಾಗಿ ಅಮೆರಿಕ ರಹಸ್ಯ ಸೇವೆಯು ಹೋಟೆಲ್‌ಆವರಣವನ್ನು ಪರಿಶೀಲಿಸುತ್ತಿದೆ. ಇದನ್ನೂ ಓದಿ: ಚಂದ್ರನ ದಕ್ಷಿಣ ಧ್ರುವದಲ್ಲಿ ಗಂಧಕ ಪತ್ತೆ ಹಚ್ಚಿದ ಚಂದ್ರಯಾನ-3
ಇನ್ನು ಚೀನಾ ಅಧ್ಯಕ್ಷ ಜಿನ್‌ಪಿಂಗ್ (Xi Jinping) ಅವರು ದೆಹಲಿಯ ತಾಜ್ ಹೋಟೆಲ್‌ನಲ್ಲಿ ಉಳಿಯುವ ಸಾಧ್ಯತೆಯಿದೆ. ಹೊಟೇಲ್ ಶಾಂಗ್ರಿ-ಲಾ ಜರ್ಮನಿ ಅಧಿಕಾರಿಗಳೊಂದಿಗೆ ಯುಕೆ ಪ್ರಧಾನಿ ರಿಷಿ ಸುನಕ್ (Rishi Sunak) ಅವರಿಗೆ ಆತಿಥ್ಯ ವಹಿಸಲು ಸಿದ್ಧತೆ ನಡೆಸುತ್ತಿದೆ. ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರು ತಮ್ಮ ಸಿಬ್ಬಂದಿಯೊಂದಿಗೆ ದಿ ಕ್ಲಾರಿಡ್ಜಸ್ ಹೋಟೆಲ್‌ನಲ್ಲಿ ತಂಗಲಿದ್ದು, ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ದೆಹಲಿಯ ಇಂಪೀರಿಯಲ್ ಹೋಟೆಲ್‌ನಲ್ಲಿ ತಂಗಲಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಗೆ ಮೊದಲ ಮಹಿಳಾ ಅಧಿಕಾರಿ
ವರದಿಗಳ ಪ್ರಕಾರ ಸೆಪ್ಟೆಂಬರ್ 8ರಿಂದ 10ನೇ ತಾರೀಕಿನವರೆಗೂ ದೆಹಲಿಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಕಚೇರಿಗಳು ಮುಚ್ಚಿರಲಿವೆ. ಅಲ್ಲದೇ ನವದೆಹಲಿ ಜಿಲ್ಲೆಯ ಮಾರುಕಟ್ಟೆಗಳು ಸೇರಿದಂತೆ ವಾಣಿಜ್ಯ ಸಂಸ್ಥೆಗಳು ಮತ್ತು ಬ್ಯಾಂಕುಗಳು ಈ ಮೂರು ದಿನಗಳು ಮುಚ್ಚಲಿದೆ. ಜಿ20 ಶೃಂಗಸಭೆ ಹಿನ್ನೆಲೆ ದೆಹಲಿ ಪೊಲೀಸರು ಹಲವು ತಿಂಗಳಿನಿಂದ ಕೆಲಸ ಮಾಡುತ್ತಿದ್ದು, ಈಗ ಕೊನೆಯ ಹಂತ ತಲುಪಿದೆ. ಜಿ20 ಶೃಂಗಸಭೆಗೆ ಸಂಪೂರ್ಣ ಸಿದ್ಧರಾಗಿದ್ದೇವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: CWRC ಶಿಫಾರಸ್ಸು ಎತ್ತಿ ಹಿಡಿದ CWMA – ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಕುಡಿಯುವ ನೀರಿಗೆ ಸಂಕಷ್ಟ ಸಾಧ್ಯತೆ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]