Bengaluru City
ಇಂದೂ ರಾಜ್ಯದಲ್ಲಿ ಕೇವಲ ಮೂವರು ಸಾವು- 408 ಮಂದಿಗೆ ಸೋಂಕು, 564 ಡಿಸ್ಚಾರ್ಜ್
ಬೆಂಗಳೂರು: ಇಂದು ಕರ್ನಾಟಕದಲ್ಲಿ 408 ಮಂದಿಗೆ ಕೊರೊನಾ ಬಂದಿದ್ದು, ಆಸ್ಪತ್ರೆಯಿಂದ 564 ಜನ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಕೇವಲ 3 ಮಂದಿ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 9,29,960ಕ್ಕೆ ಏರಿಕೆ ಆಗಿದೆ. ಈ ಪೈಕಿ 9,09,058 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 8,728 ಸಕ್ರಿಯ ಪ್ರಕರಣಗಳಿವೆ.
ಒಟ್ಟು ಇಲ್ಲಿಯವರೆಗೆ 12,155 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 187 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು 1,623 ಆಂಟಿಜನ್ ಟೆಸ್ಟ್, 1,04,632 ಆರ್ಟಿ ಪಿಸಿಆರ್ ಸೇರಿದಂತೆ ಒಟ್ಟು 1,06,255 ಪರೀಕ್ಷೆ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ 141, ದಕ್ಷಿಣ ಕನ್ನಡ 28, ಮೈಸೂರು 23 ಹಾಗೂ ಧಾರವಾಡದಲ್ಲಿ 20 ಮಂದಿಗೆ ಸೋಂಕು ಬಂದಿದೆ.
ಐಸಿಯುನಲ್ಲಿ ಒಟ್ಟು 187 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಬೆಂಗಳೂರು ನಗರದಲ್ಲಿ 84, ಕಲಬುರಗಿ 15 ಹಾಗೂ ತುಮಕೂರಿನಲ್ಲಿ 9 ಮಂದಿ ಐಸಿಯುನಲ್ಲಿದ್ದಾರೆ.