ಡೆಹ್ರಾಡೂನ್: ಉತ್ತರಖಂಡದ (Uttarakhand) ಉತ್ತರಕಾಶಿಯ (Uttarkashi) ಸಿಲ್ಕ್ಯಾರಾ ಸುರಂಗದಲ್ಲಿ (Tunnel) ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ಸತತ 11ನೇ ದಿನವು ಮುಂದುವರಿದಿದೆ. ಸಿಲುಕಿರುವ ಕಾರ್ಮಿಕರನ್ನು ಹೊರಗೆ ಕರೆತಂದ ತಕ್ಷಣ ಚಿಕಿತ್ಸೆ ನೀಡಲು ಚಿನ್ಯಾಲಿಸೌರ್‌ನ ಸಮುದಾಯ ಆರೋಗ್ಯ ಕೇಂದ್ರದಲ್ಲಿ 41 ಹಾಸಿಗೆಗಳ ಆಸ್ಪತ್ರೆಯನ್ನು ಸಿದ್ಧಪಡಿಸಲಾಗಿದೆ.
ಸುರಂಗದಲ್ಲಿ ರಕ್ಷಣಾ ಕಾರ್ಯಾಚರಣೆ ವೇಗವನ್ನು ಪಡೆದುಕೊಂಡಿದೆ. ಅಮೆರಿಕದ ಆಗರ್ ಯಂತ್ರವು ಕುಸಿತಗೊಂಡ ಸುರಂಗದ ಅವಶೇಷಗಳ ಒಳಗೆ 45 ಮೀಟರ್‌ಗಳಷ್ಟು ದೂರ ಕ್ರಮಿಸಿದೆ. ಸಿಲುಕಿರುವ ಕಾರ್ಮಿಕರನ್ನು ತಲುಪಲು 6 ಮೀಟರ್ ಉದ್ದದ 800 ಎಂಎಂ ವ್ಯಾಸದ ಎರಡು ಉಕ್ಕಿನ ಪೈಪ್‍ಗಳನ್ನು ಹಾಕಲು ಸುಮಾರು 12 ಮೀಟರ್‌ಗಳಷ್ಟು ಅಗೆಯಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕಕ್ಕೆ ಬರಲ್ವಾ ಟೆಸ್ಲಾ ಉತ್ಪಾದನಾ ಘಟಕ..?
Advertisement
ಸಿಲುಕಿರುವವರು ಅದೃಷ್ಟವಶಾತ್ ಜೀವಂತವಾಗಿದ್ದಾರೆ. ಅವರಿಗೆ ಸೂಕ್ತ ಆಹಾರ ಒದಗಿಸಲಾಗಿದೆ. ರಕ್ಷಣೆಯ ಬಳಿಕ ಅವರ ಆರೈಕೆಗಾಗಿ 15 ವೈದ್ಯರ ತಂಡವನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement
Advertisement
ತಕ್ಷಣದ ವೈದ್ಯಕೀಯ ಆರೈಕೆಗಾಗಿ ಎಂಟು ಹಾಸಿಗೆಗಳನ್ನು ಒಳಗೊಂಡಿರುವ ತಾತ್ಕಾಲಿಕ ಆಸ್ಪತ್ರೆಯನ್ನು ಸಹ ಸ್ಥಳದಲ್ಲಿ ಸ್ಥಾಪಿಸಲಾಗಿದೆ. ಹಲವಾರು ಅಂಬುಲೆನ್ಸ್‌ಗಳು ಮತ್ತು ಹೆಲಿಕಾಪ್ಟರ್‌ನ್ನು ಸ್ಥಳದಲ್ಲಿ ಇರಿಸಲಾಗಿದೆ. ಅಲ್ಲದೇ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳು ಹಾಗೂ ಏಮ್ಸ್, ಋಷಿಕೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
Advertisement
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ರಕ್ಷಣಾ ಕಾರ್ಯಾಚರಣೆಯ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಹಮಾಸ್-ಇಸ್ರೇಲ್ ನಡುವೆ ಕದನ ವಿರಾಮ ಒಪ್ಪಂದ