InternationalLatestMain Post

ಚರ್ಚ್‌ಗೆ ಬೆಂಕಿ ಬಿದ್ದು 41 ಮಂದಿ ದುರ್ಮರಣ

ಕೈರೋ: ಈಜಿಪ್ಟ್‌ನ ರಾಜಧಾನಿ ಕೈರೋದಲ್ಲಿರುವ ಕಾಪ್ಟಿಕ್ ಕ್ರಿಶ್ಚಿಯನ್ ಚರ್ಚ್‌ನಲ್ಲಿ ಭಾನುವಾರ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಚರ್ಚ್‌ನಲ್ಲಿದ್ದ 41 ಜನರು ಸಾವನ್ನಪ್ಪಿದ್ದಾರೆ ಎಂದು ಚರ್ಚ್ ಅಧಿಕಾರಿಗಳು ತಿಳಿಸಿದ್ದಾರೆ.

ರಾಜಧಾನಿಯ ವಾಯುವ್ಯ, ಕಾರ್ಮಿಕ ವರ್ಗದ ಜಿಲ್ಲೆಯ ಇಂಬಾಬಾದಲ್ಲಿರುವ ಅಬು ಸಿಫೈನ್ ಚರ್ಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಉದ್ಭವಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಅಗ್ನಿಶಾಮಕ ದಳ ತಿಳಿಸಿದೆ. ಇದನ್ನೂ ಓದಿ: ರಸ್ತೆ ಬದಿಯಲ್ಲಿ ಮೂಟೆಗಟ್ಟಲೇ ಗುಟ್ಕಾ, ತಂಬಾಕು ಪ್ಯಾಕೆಟ್‍ ಪತ್ತೆ

ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಅವರು ತಮ್ಮ ಫೇಸ್‌ಬುಕ್ ಪುಟದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಸದ್ಯ ಎಲ್ಲಾ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲು ಎಲ್ಲಾ ಪ್ರದೇಶಗಳಿಂದ ಸೇವೆಗಳನ್ನು ಸಜ್ಜುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿಧು ಮೂಸೆವಾಲಾ ಹತ್ಯೆ ಹಿಂದೆ ಆಪ್ತ ಸ್ನೇಹಿತರೂ ಸೇರಿದ್ದಾರೆ: ತಂದೆ ಆರೋಪ

ಇತ್ತೀಚಿನ ವರ್ಷಗಳಲ್ಲಿ ಈಜಿಪ್ಟ್‌ನಲ್ಲಿ ಹಲವಾರು ಮಾರಣಾಂತಿಕ ಬೆಂಕಿ ಅವಘಡಗಳು ನಡೆದಿವೆ. 2021ರ ಮಾರ್ಚ್‌ನಲ್ಲಿ ಕೈರೋದ ಜವಳಿ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದ್ದರು. 2020ರಲ್ಲಿ 2 ಆಸ್ಪತ್ರೆಗಳಲ್ಲಿ ಬೆಂಕಿ ಹೊತ್ತಿದ್ದರಿಂದ 14 ಕೋವಿಡ್ ರೋಗಿಗಳು ಸಾವನ್ನಪ್ಪಿದ್ದರು.

Live Tv

Leave a Reply

Your email address will not be published.

Back to top button