Bengaluru CityCoronaDistrictsKarnatakaLatestMain Post

ರಾಜ್ಯದಲ್ಲಿ 413 ಪಾಸಿಟಿವ್, 4 ಸಾವು – ಬೆಂಗಳೂರಿನಲ್ಲಿ 212 ಕೇಸ್

ಬೆಂಗಳೂರು: ರಾಜ್ಯದಲ್ಲಿ ರೂಪಾಂತರಿ ತಳಿ ಓಮಿಕ್ರಾನ್ ಭೀತಿಯ ನಡುವೆ ಇಂದು ಒಟ್ಟು 413 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 4 ಮರಣ ಪ್ರಕರಣ ದಾಖಲಾಗಿದೆ. ಬೆಂಗಳೂರಿನಲ್ಲಿ ಅತಿ ಹೆಚ್ಚು 212 ಕೇಸ್ ದಾಖಲಾಗಿದೆ.

ರಾಜ್ಯದಲ್ಲಿ 256 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 6,896 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,97,246 ಮಂದಿಗೆ ಕೊರೊನಾ ಬಂದಿದೆ. 29,52,101 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.39 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.96 ರಷ್ಟಿದೆ. ಇಂದು ಬೆಂಗಳೂರು ನಗರ 2, ಕೋಲಾರ ಮತ್ತು ಮಂಡ್ಯದಲ್ಲಿ ತಲಾ 1 ಮರಣ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪೋಷಕರು 2 ಡೋಸ್ ಲಸಿಕೆ ಪಡೆಯದಿದ್ದರೆ ಮಕ್ಕಳು ಶಾಲೆಗೆ ಬರುವಂತಿಲ್ಲ: ಅಶೋಕ್

ರಾಜ್ಯದಲ್ಲಿ ಇಂದು ಒಟ್ಟು 4,11,251 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,05,879 ಸ್ಯಾಂಪಲ್ (ಆರ್​ಟಿಪಿಸಿಆರ್ 88,084 + 17,795 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಓಮಿಕ್ರಾನ್ ಆತಂಕ- ಮದುವೆ ಸಮಾರಂಭಗಳಲ್ಲಿ 500 ಮಂದಿಗಷ್ಟೇ ಅವಕಾಶ

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 212, ಬೀದರ್ 0, ಚಾಮರಾಜನಗರ 3, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 2, ಚಿತ್ರದುರ್ಗ 2, ದಕ್ಷಿಣ ಕನ್ನಡ 10, ದಾವಣಗೆರೆ 2, ಧಾರವಾಡ 18, ಗದಗ 0, ಹಾಸನ 11, ಹಾವೇರಿ 8, ಕಲಬುರಗಿ 1, ಕೊಡಗು 0, ಕೋಲಾರ 0, ಕೊಪ್ಪಳ 0, ಮಂಡ್ಯ 2, ಮೈಸೂರು 45, ರಾಯಚೂರು 0, ರಾಮನಗರ 0, ಶಿವಮೊಗ್ಗ 33, ತುಮಕೂರು 30, ಉಡುಪಿ 19, ಉತ್ತರ ಕನ್ನಡ 6, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.

Leave a Reply

Your email address will not be published.

Back to top button