ಬೆಂಗಳೂರು: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಪ್ರಜ್ವಲ್ ರೇವಣ್ಣ ಅವರ 10 ದಿನಗಳ ಪೊಲೀಸ್ ಕಸ್ಟಡಿ (Police Custody) ಅಂತ್ಯಗೊಂಡ ಹಿನ್ನೆಲೆಯಲ್ಲಿ ಸೋಮವಾರ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಈ ವೇಳೆ 42ನೇ ಎಸಿಎಂಎಂ ನ್ಯಾಯಾಲಯವು (ACMM Court) 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದನ್ನೂ ಓದಿ: ನನಗೆ ಯಾರೂ ಹಿತಶತ್ರುಗಳಿಲ್ಲ, ನನಗೆ ನಾನೇ ಶತ್ರು, ಸೋಲಿಗೆ ನಾನೇ ಹೊಣೆ: ಡಿಕೆ ಸುರೇಶ್
Advertisement
Advertisement
ಪ್ರಜ್ವಲ್ ವಿರುದ್ಧ ಇನ್ನೂ ಎರಡು ಪ್ರಕರಣಗಳ ತನಿಖೆ ಬಾಕಿ ಹಿನ್ನೆಲೆ ಪುನಃ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಪ್ರತಿ ಪ್ರಕರಣದ ತನಿಖೆಯನ್ನ ಪ್ರತ್ಯೇಕವಾಗಿ ನಡೆಸುತ್ತಿರುವ ಎಸ್‌ಐಟಿ ಟೀಂ, ಸದ್ಯ ಈಗ ಹೊಳೆನರಸೀಪುರ ಟೌನ್ ಠಾಣೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿತ್ತು. ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಸಂಬಂಧ ಕಳೆದ 14 ದಿನಗಳಿಂದ ಪ್ರಜ್ವಲ್ ವಿಚಾರಣೆ ನಡೆಸಲಾಗಿತ್ತು.
Advertisement
Advertisement
ಇದೇ ವೇಳೆ ವೈದ್ಯಕೀಯ ಪರೀಕ್ಷೆ, ಧ್ವನಿ ಪರೀಕ್ಷೆ ಕೂಡ ನಡೆಸಲಾಗಿತ್ತು. ಬಳಿಕ ಕೃತ್ಯ ಎಸಗಿದ ಸ್ಥಳ ಮಹಜರು ಕೂಡ ನಡೆದಿತ್ತು. ಒಂದು ಪ್ರಕರಣದ ತನಿಖೆಯನ್ನ ಎಸ್‌ಐಟಿ ಬಹುತೇಕ ಪೂರ್ಣಗೊಳಿಸಿದ್ದು, ಮುಂದಿನ 2 ಪ್ರಕರಣಗಳ ತನಿಖೆ ಸಂಬಂಧ ಪ್ರತ್ಯೇಕವಾಗಿ ತನಿಖೆ ಶುರು ಮಾಡಲಿದೆ ಎಂದು ಮೂಲಗಳಿಂದ ತಿಳಿದುಬಂದಿತ್ತು. ಆದರೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದನ್ನೂ ಓದಿ: ‘ಎ ಮಾಸ್ಟರ್ ಪೀಸ್’ ನಿರ್ದೇಶಕನ ಜೊತೆ ಮದುವೆ ಆಗಿದೆ ಎಂದ ಜ್ಯೋತಿ ರೈ