ಬೆಳಗಾವಿ: ಸಾಲಮನ್ನಾ ಆದೇಶ ಹೊರಡಿಸಿದ್ರು ರಾಜ್ಯದಲ್ಲಿ ಅನ್ನದಾತರ ಸಂಕಷ್ಟಗಳಿಗೆ ಕೊನೆಯೇ ಇಲ್ಲದಂತಾಗಿದೆ. ಕುಂದಾನಗರಿಯೊಂದರಲ್ಲೇ 6 ತಿಂಗಳಲ್ಲಿ 43 ರೈತರು ಆತ್ಮಹತ್ಯೆಯ ದಾರಿ ಹಿಡಿದಿದ್ದಾರೆ.
ರಾಜ್ಯದಲ್ಲಿ ಒಂದು ವರ್ಷದ ಅವಧಿಯಲ್ಲಿ ಎರಡು ಸರ್ಕಾರಗಳು ರೈತರ ಸಾಲಮನ್ನಾ ಮಾಡಿವೆ. ಆದರೂ ರೈತರ ನೂರಾರು ಸಮಸ್ಯೆಗಳಿಗೆ ಕೊನೆಯೇ ಇಲ್ಲದಂತಾಗಿದೆ. ಗಡಿ ಜಿಲ್ಲೆ ಬೆಳಗಾವಿಯ ರೈತರು ಇಂದಿಗೂ ಅನೇಕ ಸಮಸ್ಯೆಗಳಿಂದ ಹೊರಬಂದಿಲ್ಲ. ಜಿಲ್ಲೆಯಲ್ಲಿ 23 ಸಕ್ಕರೆ ಕಾರ್ಖಾನೆಗಳಿದ್ದು, ಕಾರ್ಖಾನೆಗಳಿಂದ ಸರಿಯಾದ ಸಮಯಕ್ಕೆ ಬಿಲ್ ಬಾರದೆ ಕಂಗಾಲಾಗಿದ್ದಾರೆ. ಮೀಟರ್ ಬಡ್ಡಿ, ಬೆಳೆ ನಷ್ಟ, ಬೆಳೆದ ಬೆಳೆಗೆ ಸರಿಯಾದ ಬೆಲೆ ಇಲ್ಲದೆ ಜಿಲ್ಲೆಯೊಂದರಲ್ಲಿ ಕಳೆದ 6 ತಿಂಗಳ ಅವಧಿಯಲ್ಲಿ 43 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.
Advertisement
ಈ ಬಾರಿ ಸರ್ಕಾರ ಬೆಳಗಾವಿಯ ಜಿಲ್ಲೆಯ ಅಥಣಿ, ಕಾಗವಾಡ, ರಾಮದುರ್ಗ ಹಾಗೂ ಸವದತ್ತಿ ತಾಲೂಕುಗಳನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿದೆ. ಇಲ್ಲಿ ಉದ್ಯೋಗ ಖಾತರಿ ಯೋಜನೆ ಅಡಿ ಕೂಲಿ ಕಾರ್ಮಿಕರಿಗೆ ಕೆಲಸ ಕೊಡಲು ಜಿಲ್ಲಾಡಳಿತ ಮುಂದಾಗಿದೆ. ಸಾಲಮನ್ನಾ ಜೊತೆಗೆ ಸರ್ಕಾರ ರೈತ ಪರ ಅನೇಕ ಯೋಜನೆಗಳನ್ನು ಘೋಷಣೆ ಮಾಡಿದೆ. ಆದ್ರೂ ರೈತರ ಆತ್ಮಹತ್ಯೆ ಪ್ರಕರಣಗಳು ಕಡಿಮೆಯಾಗದಿರೋದು ಆತಂಕಕಾರಿ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv