ಬೆಂಗಳೂರು: ಶಿವಮೊಗ್ಗ (Shivamogga) ಕೋಮುಗಲಭೆ (Communal Riots) ಪ್ರಕರಣದಲ್ಲಿ 43ಕ್ಕೂ ಹೆಚ್ಚು ಜನರನ್ನು ಬಂಧನ ಮಾಡಲಾಗಿದ್ದು, ಸದ್ಯ ಶಿವಮೊಗ್ಗ ಶಾಂತಿಯುತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ.
ಶಿವಮೊಗ್ಗ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಭಾನುವಾರ ಈದ್ ಮಿಲಾದ್ ಮೆರವಣಿಗೆ ಮಾಡುತ್ತಿದ್ದರು. ಈ ವೇಳೆ ಯಾರೋ ದುಷ್ಕರ್ಮಿಗಳು ಕಲ್ಲು ಹೊಡೆದಿದ್ದಾರೆ. ರಾಗಿಗುಡ್ಡದಲ್ಲಿ (Ragigudda) ಈ ಘಟನೆ ನಡೆದಿದ್ದು, ಪೊಲೀಸರ ಮೇಲೂ ಕಲ್ಲು ತೂರಾಟ ಮಾಡಿದ್ದಾರೆ. ಹೀಗಾಗಿ ಅನಿವಾರ್ಯವಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಹಬ್ಬಗಳಿದ್ದರೂ ಸರ್ಕಾರ ಅಗತ್ಯ ಕ್ರಮ ಕೈಗೊಂಡಿಲ್ಲ: ಬೊಮ್ಮಾಯಿ ಕಿಡಿ
Advertisement
Advertisement
ಕಲ್ಲು ತೂರಾಟ ಮಾಡಿದವರು, ಗಲಾಟೆ ಮಾಡಿದ 43ಕ್ಕೂ ಹೆಚ್ಚು ಜನರನ್ನು ಬಂಧನ ಮಾಡಲಾಗಿದೆ. ಅವರ ಮೇಲೆ ಮೊಕದ್ದಮೆ ಹಾಕಲಾಗಿದೆ. ಯಾವುದೇ ಧಾರ್ಮಿಕ ಕಾರ್ಯಕ್ರಮದಲ್ಲಿ ಕಲ್ಲು ಎಸೆಯೋದು ಕಾನೂನು ಬಾಹಿರ ಚಟುವಟಿಕೆ. ಇಂತಹ ಘಟನೆಗಳನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಇಂತಹ ಘಟನೆಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತೇನೆ ಎಂದರು. ಇದನ್ನೂ ಓದಿ: ಮಳೆಗಾಲದಲ್ಲೂ ಬರಿದಾದ ಕೆಆರ್‌ಎಸ್ ಡ್ಯಾಂ ನೋಡಿ ರಾಜವಂಶಸ್ಥೆ ಬೇಸರ
Advertisement
Advertisement
ಶಿವಮೊಗ್ಗ ಈಗ ಸಂಪೂರ್ಣ ನಿಯಂತ್ರಣದಲ್ಲಿ ಇದೆ. ಶಿವಮೊಗ್ಗ ಶಾಂತಿಯುತವಾಗಿದೆ. ಪೊಲೀಸ್ ಇಲಾಖೆ ಎಲ್ಲಾ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಶಾಂತಿ ಕಾಪಾಡಿ ಎಂದು ನಾನು ಮನವಿ ಮಾಡುತ್ತೇನೆ. ಶಾಂತಿ ಕಾಪಾಡಲು ಸರ್ಕಾರ ಅಗತ್ಯ ಕ್ರಮ ತೆಗೆದುಕೊಂಡಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಖರ್ಗೆ ಅಳಿಯ ಸ್ಪರ್ಧೆ ಸಾಧ್ಯತೆ: ಚಿಂಚನಸೂರು
Web Stories