– ಬೆಂಗ್ಳೂರಲ್ಲಿ ಮತ್ತೆ ನಿಧಾನಗತಿಯಲ್ಲಿ ಕೇಸ್ ಏರಿಕೆ
ಬೆಂಗಳೂರು: ಇಂದು ಕರ್ನಾಟಕದಲ್ಲಿ 438 ಮಂದಿಗೆ ಕೊರೊನಾ ಬಂದಿದ್ದು, ಆಸ್ಪತ್ರೆಯಿಂದ 344 ಜನ ಡಿಸ್ಚಾರ್ಜ್ ಆಗಿದ್ದಾರೆ. 6 ಜನ ಕೊರೊನಾಗೆ ಬಲಿಯಾಗಿದ್ದಾರೆ.
Advertisement
ಇಂದು ರಾಜ್ಯದಲ್ಲಿ ಒಟ್ಟು 71,642 ಮಂದಿಗೆ ಲಸಿಕೆ ನೀಡಲು ಯೋಜನೆ ಹಾಕಿಕೊಳ್ಳಲಾಗಿತ್ತು. ಈ ಪೈಕಿ 19,612 (ಶೇ.27)ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ.
Advertisement
Advertisement
ಇಂದು ಬಾಗಲಕೋಟೆ, ಬಳ್ಳಾರಿ, ಗದಗ, ಕೊಪ್ಪಳ, ರಾಯಚೂರು, ರಾಮನಗರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,46,076 ಕ್ಕೆ ಏರಿಕೆ ಆಗಿದೆ. ಈ ಪೈಕಿ 9,27,924 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 5,860 ಸಕ್ರಿಯ ಪ್ರಕರಣಗಳಿವೆ.
Advertisement
ಒಟ್ಟು ಇಲ್ಲಿಯವರೆಗೆ 12,273 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 125 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 5098 ಆಂಟಿಜನ್ ಟೆಸ್ಟ್, 41,930 ಆರ್ಟಿ ಪಿಸಿಆರ್ ಸೇರಿದಂತೆ ಒಟ್ಟು 47,028 ಮಂದಿಗೆ ಪರೀಕ್ಷೆ ಮಾಡಲಾಗಿದೆ.
ಇಂದು ಬೆಂಗಳೂರಿನಲ್ಲಿ ಬರೋಬ್ಬರಿ 306 ಕೇಸ್ ಪತ್ತೆಯಾಗಿದೆ. ಈ ಮೂಲಕ ಬೆಂಗಳೂರಿನಲ್ಲಿ ಮತ್ತೆ ನಿಧಾನಗತಿಯಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರತಿ ದಿನ 90 ರಿಂದ 150 ಕೇಸ್ ಸರಾಸರಿ ದಾಖಲಾಗುತ್ತಿತ್ತು. ನಿನ್ನೆ 198 ಕೇಸ್ ದಾಖಲಾಗಿತ್ತು. ಆದರೆ ಇಂದು 108 ಕೇಸ್ ಏರಿಕೆಯೊಂದಿಗೆ 306 ಕೇಸ್ ವರದಿಯಾಗಿದೆ. ದಕ್ಷಿಣ ಕನ್ನಡ 19, ಚಿತ್ರದುರ್ಗ 11, ಬೆಳಗಾವಿ 10, ಉಡುಪಿ 11, ಮೈಸೂರು 12 ತುಮಕೂರು 8, ಸೋಂಕು ಬಂದಿದೆ. ಒಟ್ಟು 125 ಮಂದಿ ಐಸಿಯುನಲ್ಲಿದ್ದು, ಬೆಂಗಳೂರಿನಲ್ಲಿ 64, ಕಲಬುರುಗಿಯಲ್ಲಿ 10, ಹಾಸನ 6, ಮತ್ತು ಉಡುಪಿಯ 4 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.