ಹಾಂಗ್‌ಕಾಂಗ್: ಹಾಂಗ್‌ಕಾಂಗ್‌ನ (Hong Kong) ತೈಪೊ ಜಿಲ್ಲೆಯಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಅಗ್ನಿ ಅವಘಡ (Fire Accident) ರೌದ್ರ ನರ್ತನ ತಾಳಿದೆ. ವಾಂಗ್ ಫುಕ್ ಕೋರ್ಟ್ ಎಂಬ 8 ಬಹುಮಹಡಿ ಕಟ್ಟಡಗಳ ಸಂಕೀರ್ಣದಲ್ಲಿ ಕಾಣಿಸಿಕೊಂಡ ಬೆಂಕಿಗೆ ಬಲಿಯಾಗಿರುವವರ ಸಂಖ್ಯೆ 44ಕ್ಕೆ ಏರಿಕೆಯಾಗಿದೆ.
This fire in Hong Kong’s Tai Po district killed at least 13 people (including a fire man). It’s raging out of control through 7 of 8 towers of this public housing development that’s home to more than 4,000 people#HongKong pic.twitter.com/vZvljZrclM
— Ivan Watson (@IvanCNN) November 26, 2025
ಇನ್ನೂ ಹಲವರು ಒಳಗೇ ಸಿಲುಕಿರುವ ಪರಿಣಾಮ ಸಾವು-ನೋವು ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ 900ಕ್ಕೂ ಹೆಚ್ಚು ಸಂತ್ರಸ್ತರಿಗೆ ತಾತ್ಕಾಲಿಕ ಆಶ್ರಯ ಕೇಂದ್ರಗಳಲ್ಲಿ ಆಶ್ರಯ ನೀಡಲಾಗಿದೆ. ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಸಂತ್ರಸ್ತರಿಗೆ ಎಲ್ಲಾ ರೀತಿಯ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹತ್ಯೆ ವದಂತಿ

ಸುಮಾರು 2,000 ಅಪಾರ್ಟ್‌ಮೆಂಟ್‌ಗಳನ್ನ ಹೊಂದಿರುವ ಈ ಬೃಹತ್ ವಸತಿ ಸಮುಚ್ಚಯದಲ್ಲಿ ದುರಸ್ತಿ ಮತ್ತು ನಿರ್ವಹಣಾ ಕಾರ್ಯಗಳು ನಡೆಯುತ್ತಿದ್ದವು. ಇದಕ್ಕಾಗಿ ಕಟ್ಟಡಗಳ ಹೊರಭಾಗದಲ್ಲಿ ಬಿದಿರಿನ ಅಟ್ಟಣಿಗೆ ರಚಿಸಲಾಗಿತ್ತು. ಈ ಬಿದಿರಿನ ರಚನೆಗಳಿಗೆ ಮೊದಲು ಬೆಂಕಿ ಹೊತ್ತಿಕೊಂಡಿದ್ದು, ಬಲವಾದ ಗಾಳಿ ಮತ್ತು ಉರಿಯುತ್ತಿದ್ದ ಅವಶೇಷಗಳು ತೂರಿಬಂದ ಪರಿಣಾಮ, ಪಕ್ಕದ 7 ಕಟ್ಟಡಗಳಿಗೂ ಬೆಂಕಿ ವ್ಯಾಪಿಸಿದೆ. ಇದನ್ನೂ ಓದಿ: ಟ್ರಂಪ್ ಸುಂಕಾಸ್ತ್ರದ ನಡುವೆಯೂ ಭಾರತದ ಕೃಷಿ ಉತ್ಪನ್ನ ರಫ್ತಲ್ಲಿ ಸಾಧನೆ – ಸಾಧ್ಯವಾಗಿದ್ದು ಹೇಗೆ?

ಅಗ್ನಿಶಾಮಕ ಸಿಬ್ಬಂದಿಯೂ ಸಾವು
ಬೆಂಕಿಯ ತೀವ್ರತೆಗೆ ಕಿಟಕಿಗಳ ಮೂಲಕ ಜ್ವಾಲೆಗಳು ಹೊರಬರುತ್ತಿದ್ದವು ಮತ್ತು ಬಿದಿರು ಸಿಡಿಯುವ ಶಬ್ದಗಳು ಜೋರಾಗಿ ಕೇಳಿಸುತ್ತಿದ್ದವು ಎಂದು ಪ್ರತ್ಯಕ್ಷದರ್ಶಿಗಳು ವರದಿ ಮಾಡಿದ್ದಾರೆ. ಘಟನಾ ಸ್ಥಳದಲ್ಲೇ 9 ಜನರನ್ನು ಮೃತರೆಂದು ಘೋಷಿಸಲಾದರೆ, ಆಸ್ಪತ್ರೆಗೆ ಸಾಗಿಸಿದ ನಂತರ ಉಳಿದವರು ಸಾವನ್ನಪ್ಪಿದ್ದಾರೆ. ದುರದೃಷ್ಟವಶಾತ್, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ಓರ್ವ ಅಗ್ನಿಶಾಮಕ ಸಿಬ್ಬಂದಿ ಕೂಡ ಪ್ರಾಣ ಕಳೆದುಕೊಂಡಿದ್ದಾರೆ.
ಇನ್ನೂ ನೂರಾರು ಜನರು ನಾಪತ್ತೆಯಾಗಿದ್ದು, ಮೃತರ ಸಂಖ್ಯೆ ದೊಡ್ಡ ಮಟ್ಟಕ್ಕೆ ಏರಿಕೆಯಾಗುವ ಆತಂಕವಿದೆ. ಕಟ್ಟಡಗಳ ಒಳಗೆ ಉಷ್ಣಾಂಶ ವಿಪರೀತವಾಗಿರುವುದರಿಂದ ಸಹಾಯ ಕೋರಿದ ಕೆಲವು ಮಹಡಿಗಳಿಗೆ ತಲುಪಲು ಸಾಧ್ಯವಾಗುತ್ತಿಲ್ಲ ಎಂದು ಅಗ್ನಿಶಾಮಕ ದಳದ ಉಪ ನಿರ್ದೇಶಕ ಡೆರೆಕ್ ಆರ್ಮ್‌ಸ್ಟ್ರಾಂಗ್ ಚಾನ್ ತಿಳಿಸಿದ್ದಾರೆ. ಇದನ್ನೂ ಓದಿ: ಅರುಣಾಚಲ ಪ್ರದೇಶ ನಮ್ಮದು – ಭಾರತದ ಮಹಿಳೆ ಬಂಧನದ ಬಳಿಕ ಚೀನಾಗೆ ಭಾರತ ಖಡಕ್ ಉತ್ತರ

ಮೂವರ ಬಂಧನ
ಘಟನೆಗೆ ಸಂಬಂಧಿಸಿದಂತೆ ಹಾಂಗ್‌ಕಾಂಗ್ ಪೊಲೀಸರು ತ್ವರಿತ ತನಿಖೆ ಆರಂಭಿಸಿದ್ದು, ನಿರ್ಲಕ್ಷ್ಯದ ನರಹತ್ಯೆ ಆರೋಪದ ಮೇಲೆ ಮೂವರು ಶಂಕಿತರನ್ನು ಬಂಧಿಸಿದ್ದಾರೆ. ಆದರೆ ಇವರು ನಿರ್ದಿಷ್ಟವಾಗಿ ಯಾವ ರೀತಿಯ ನಿರ್ಲಕ್ಷ್ಯ ತೋರಿದ್ದಾರೆ ಎಂಬ ವಿವರಗಳನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ.
ಕಟ್ಟಡದ ದುರಸ್ತಿ ಕಾರ್ಯ ನಡೆಯುತ್ತಿದ್ದರಿಂದ ಹಲವು ನಿವಾಸಿಗಳು ಕಿಟಕಿಗಳನ್ನು ಮುಚ್ಚಿಕೊಂಡಿದ್ದರು. ಹೀಗಾಗಿ ಹೊರಗೆ ಬೆಂಕಿ ಬಿದ್ದಿರುವುದು ಹಲವರಿಗೆ ತಡವಾಗಿ ಅರಿವಿಗೆ ಬಂದಿದೆ. ಫೋನ್ ಕರೆಗಳ ಮೂಲಕ ನೆರೆಹೊರೆಯವರು ಎಚ್ಚರಿಸಿದ ನಂತರವಷ್ಟೇ ಕೆಲವರು ಹೊರಬಂದಿದ್ದಾರೆ. ವೃದ್ಧರು ಹೊರಬರಲಾಗದೆ ಸಿಲುಕಿರುವ ಸಾಧ್ಯತೆ ಇದೆ.

