ಬೆಂಗಳೂರು: ರಾಜ್ಯದಲ್ಲಿ ಇಂದು 442 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ. 621 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
Advertisement
ರಾಜ್ಯದಲ್ಲಿ ಒಟ್ಟು 11,619 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ರೇಟ್ ಶೇ.0.36ಕ್ಕೆ ಇಳಿಕೆಯಾಗಿದೆ. ಮರಣ ಪ್ರಮಾಣ ಶೇ.1.58ರಷ್ಟಿದೆ. ಈವರೆಗೆ ರಾಜ್ಯದಲ್ಲಿ ಒಟ್ಟು 29,79,773 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು 29,30,264 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ನಾಯಿಯಿಂದ ನಾಯಿಗೆ ರಕ್ತದಾನ
Advertisement
Advertisement
ರಾಜ್ಯದಲ್ಲಿ ಇಂದು 1,14,554 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,22,647 ಸ್ಯಾಂಪಲ್ (ಆರ್ಟಿ ಪಿಸಿಆರ್ 1,03,698 + 18,949 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ದಿನದ ಕೊರೊನಾ ಪ್ರಕರಣಗಳ ಸಂಖ್ಯೆ ಒಂದಂಕಿಗೆ ಕುಸಿದಿದೆ. ಬೆಂಗಳೂರಿನಲ್ಲಿ ಇಂದು 166 ಜನಕ್ಕೆ ಕೊರೊನಾ ಸೋಂಕು ತಗುಲಿದ್ದು, 2 ಜನ ಮರಣ ಹೊಂದಿದ್ದಾರೆ. 173 ಜನ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 5, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 7, ಬೆಂಗಳೂರು ನಗರ 166, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 14, ಚಿತ್ರದುರ್ಗ 2, ದಕ್ಷಿಣ ಕನ್ನಡ 43, ದಾವಣಗೆರೆ 2, ಧಾರವಾಡ 2, ಗದಗ 0, ಹಾಸನ 35, ಹಾವೇರಿ 2, ಕಲಬುರಗಿ 2, ಕೊಡಗು 12, ಕೋಲಾರ 13, ಕೊಪ್ಪಳ 0, ಮಂಡ್ಯ 15, ಮೈಸೂರು 31, ರಾಯಚೂರು 1, ರಾಮನಗರ 2, ಶಿವಮೊಗ್ಗ 8, ತುಮಕೂರು 36, ಉಡುಪಿ 17, ಉತ್ತರ ಕನ್ನಡ 23, ವಿಜಯಪುರ ಮತ್ತು ಯಾದಗಿರಿಯಲ್ಲಿ ಕೊರೊನಾ ಪ್ರಕರಣ ದಾಖಲಾಗಿಲ್ಲ.