ನವದೆಹಲಿ: 45 ವರ್ಷ ಮೇಲ್ಪಟ್ಟವರಿಗೆ ಕೆಲಸ ಮಾಡುವ ಸ್ಥಳದಲ್ಲೇ ಲಸಿಕೆ ನೀಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.
ಏಪ್ರಿಲ್ 11 ರಿಂದ ಸಾರ್ವಜನಿಕ ಮತ್ತು ಖಾಸಗಿಯಾಗಿ ಕಾರ್ಯನಿರ್ವಹಿಸುವ ವ್ಯಕ್ತಿಗಳಿಗೆ ಅವರು ಕೆಲಸ ಮಾಡುವ ಸ್ಥಳದಲ್ಲಿ ಲಸಿಕೆ ನೀಡಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ.
ಕೋವಿಡ್ ಲಸಿಕೆ ವಿತರಣೆ ಪ್ರಕ್ರಿಯೆಯನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಈ ಹೆಜ್ಜೆಯನ್ನು ಇಟ್ಟಿದ್ದು ಒಂದು ಕೊರೊನಾ ಲಸಿಕೆ ಕೇಂದ್ರ ತೆರೆಯಬೇಕಾದರೆ 100 ಮಂದಿ 45 ವರ್ಷ ಮೇಲ್ಪಟ್ಟ ವ್ಯಕ್ತಿಗಳು ಇರಬೇಕು ಎಂದು ತಿಳಿಸಿದೆ.
ಕೆಲಸ ಮಾಡುವ ಸ್ಥಳದಲ್ಲೇ ಲಸಿಕೆ ವಿತರಿಸುವ ಸಂಬಂಧ ಕೇಂದ್ರ ಆರೋಗ್ಯ ಸಚಿವಾಲಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.