ಟೆಲ್ ಅವಿವ್: ದಕ್ಷಿಣ ಗಾಜಾದ (Gaza) ರಫಾದಲ್ಲಿನ (Rafah) ನಿರಾಶ್ರಿತರ ಡೇರೆಗಳ ಮೇಲೆ ಇಸ್ರೇಲ್ (Israel) ನಡೆಸಿದ ವಾಯುದಾಳಿಗೆ ಕನಿಷ್ಠ 45 ಮೃತಪಟ್ಟಿದ್ದಾರೆ.
ದಕ್ಷಿಣ ನಗರವಾದ ರಫಾದಿಂದ ಸ್ಥಳಾಂತರಗೊಂಡವರ ಶಿಬಿರದ ಮೇಲೆ ಇಸ್ರೇಲಿ ನಡೆಸಿದ ದಾಳಿಯಲ್ಲಿ ಕನಿಷ್ಠ 23 ಮಹಿಳೆಯರು, ಮಕ್ಕಳು ಮತ್ತು ವೃದ್ಧರು ಸೇರಿದಂತೆ ಕನಿಷ್ಠ 45 ಪ್ಯಾಲೆಸ್ಟೀನಿಯಾದವರು ಸಾವನ್ನಪ್ಪಿದ್ದಾರೆ ಎಂದು ಗಾಜಾ ಆರೋಗ್ಯ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಮಿಜೋರಾಂನಲ್ಲಿ ಭಾರೀ ಮಳೆ- ಕಲ್ಲುಕ್ವಾರಿ ಕುಸಿದು 10 ಮಂದಿ ದುರ್ಮರಣ, ಹಲವರು ನಾಪತ್ತೆ
ಸಚಿವಾಲಯವು ಇಸ್ರೇಲ್‌ನ ಮಿಲಿಟರಿ ದಾಳಿಯಿಂದ ಸತ್ತವರ ಸಂಖ್ಯೆ 36,050 ಕ್ಕೆ ಏರಿಕೆಯಾಗಿದ್ದು, 81,026 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿಸಿದೆ.
ಹಮಾಸ್ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡಿದೆ ಎಂದು ಇಸ್ರೇಲ್ ಸೇನೆಯು ತಿಳಿಸಿದೆ. ಕಳೆದ ರಾತ್ರಿ ಗಾಜಾ ಪಟ್ಟಿಯಲ್ಲಿನ ಪ್ಯಾಲೇಸ್ಟಿನಿಯನ್ ನಾಗರಿಕರ ಮೇಲಿನ ಭೀಕರ ದಾಳಿ ಪರಿಣಾಮವನ್ನು ಪರಿಶೀಲಿಸುತ್ತಿದೆ ಎಂದು ಇಸ್ರೇಲ್ ಹೇಳಿದೆ. ಇದನ್ನೂ ಓದಿ: ರಸ್ತೆ ದಾಟುವಾಗ ಕಾರು ಡಿಕ್ಕಿ – ಅಮೆರಿಕದಲ್ಲಿ ತೆಲಂಗಾಣ ಮೂಲದ ಯುವತಿ ಸಾವು
ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲಿಗಳನ್ನು ಗುರಿಯಾಗಿಸಿ ನಡೆಸಲಾಗಿದ್ದ ಹಲವು ದಾಳಿಗಳಿಗೆ ಜವಾಬ್ದಾರರಾಗಿರುವ ಇಬ್ಬರು ಹಮಾಸ್ ಉಗ್ರಗಾಮಿಗಳನ್ನು ಗುರಿಯಾಗಿಟ್ಟುಕೊಂಡು ಈ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಸ್ಪಷ್ಟಪಡಿಸಿದೆ.