ಬೀದರ್: ಜಿಲ್ಲೆಯಲ್ಲಿ ಪ್ರತ್ಯೇಕ ಕಡೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬೀದರ್ (Bidar) ಪೊಲೀಸರು ಅರೆಸ್ಟ್ ಮಾಡಿ, 45 ಲಕ್ಷ ರೂ. ಮೌಲ್ಯದ ಗಾಂಜಾವನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಬೀದರ್ (Bidar) ನಗರದ ಕೆಇಬಿ ಫಂಕ್ಷನ್ ಹಾಲ್ ಬಳಿ ವ್ಯಕ್ತಿಯೋರ್ವ ಗಾಂಜಾ ಮಾರಾಟ ಮಾಡುತ್ತಿದ್ದ. ಈ ವೇಳೆ ಬೀದರ್ ಪೊಲೀಸರು ಖಚಿತ ಮಾಹಿತಿ ಮೇರೆಗೆ ಭರ್ಜರಿ ಕಾರ್ಯಾಚರಣೆ ನಡೆಸಿ, ಬರೋಬ್ಬರಿ 25 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ಈ ವೇಳೆ ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.ಇದನ್ನೂ ಓದಿ: ಹಂಪಿಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್ – ದೇಶದ ಹೆಸರಲ್ಲಿ ಪೂಜೆ
ಇನ್ನೂ ಬೀದರ್‌ನಿಂದ ಮನ್ನಾಏಖೇಳಿಗೆ ದ್ವಿಚಕ್ರ ವಾಹನದಲ್ಲಿ ವ್ಯಕ್ತಿಯೋರ್ವ ಗಾಂಜಾ ಸಾಗಾಟ ಮಾಡುತ್ತಿದ್ದ. ಈ ವೇಳೆ ಪೊಲೀಸರು ಜಿಲ್ಲೆಯ ಚಿಟ್ಟಗುಪ್ಪ ತಾಲೂಕಿನ ಮೀನಕೇರಾ ಕ್ರಾಸ್ ಬಳಿ ದಾಳಿ ನಡೆಸಿದ್ದು, 20 ಲಕ್ಷ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಎಸ್ಪಿ ಪ್ರದೀಪ್ ಗುಂಟಿ ಮಾರ್ಗದರ್ಶನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಈ ಕುರಿತು ಗಾಂಧಿಗಂಜ್ ಮತ್ತು ಮನ್ನಾಏಖೇಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: Karnataka | ಈ ವರ್ಷದಿಂದ 33% ಅಂಕ ಪಡೆದರೆ SSLC ಪಾಸ್