ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 45 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಈ ಮೂಲಕ ನಿನ್ನೆಗಿಂತ 2 ಪ್ರಕರಣ ಇಳಿಕೆ ಕಂಡಿದೆ. ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ಈ ಮೂಲಕ ರಾಜ್ಯದಲ್ಲಿ 0.00% ಮರಣ ಪ್ರಮಾಣ ಇಂದು ಕೂಡ ಮುಂದುವರಿದಿದೆ.
Advertisement
ಬೆಂಗಳೂರು ನಗರದಲ್ಲಿ ಇಂದು 41 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,057 ಮರಣ ಪ್ರಕರಣ ಪತ್ತೆಯಾಗಿದೆ. ರಾಜ್ಯದ ಪಾಸಿಟಿವಿಟಿ ರೇಟ್ 0.73% ಮತ್ತು ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,441ರಲ್ಲಿ ಸ್ಥಿರವಾಗಿದೆ. ಒಟ್ಟು 45 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಕೋವಿಡ್ ಉಲ್ಬಣ – ಉತ್ತರ ಪ್ರದೇಶದಲ್ಲಿ ಹೈ ಅಲರ್ಟ್
Advertisement
Advertisement
ಈವರೆಗೆ ರಾಜ್ಯದಲ್ಲಿ ಒಟ್ಟು 39,46,315 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,04,775 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 36,797 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 6,107 ಸ್ಯಾಂಪಲ್ (ಆರ್ಟಿಪಿಸಿಆರ್ 4,938 + 1,169 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಹರ್ಷ ಕೊಲೆಯ ಪ್ರತೀಕಾರಕ್ಕೆ ನಡೆಯಿತಾ ಸಂಚು – ಪೊಲೀಸ್ ಕಾರ್ಯಾಚರಣೆಯಿಂದ ಸಂಚು ವಿಫಲ
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 41, ಮೈಸೂರಿನಲ್ಲಿ 2 ಮತ್ತು ಕೋಲಾರದಲ್ಲಿ 1 ಪಾಸಿಟಿವ್ ಕೇಸ್ ದಾಖಲಾಗಿದೆ.