ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 46 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಈ ಮೂಲಕ ನಿನ್ನೆಗಿಂತ ಇಂದು ಒಟ್ಟು 31 ಕೇಸ್ ಇಳಿಕೆ ಕಂಡಿದೆ. ಇಂದು ಶೂನ್ಯ ಮರಣ ಪ್ರಕರಣ ವರದಿಯಾಗಿದೆ.
ಬೆಂಗಳೂರು ನಗರದಲ್ಲಿ 39 ಪಾಸಿಟಿವ್ ಕೇಸ್ ಮತ್ತು ಶೂನ್ಯ ಮರಣ ಪ್ರಕರಣ ದಾಖಲಾಗಿದೆ. ಇಂದು 0.00% ಮರಣ ಪ್ರಮಾಣವಿದ್ದು, ರಾಜ್ಯದಲ್ಲಿ ಈವರೆಗೆ ಒಟ್ಟು 40,057 ಮರಣ ಪ್ರಕರಣ ಪತ್ತೆಯಾಗಿದೆ. ರಾಜ್ಯದ ಪಾಸಿಟಿವಿಟಿ ರೇಟ್ 0.46% ಮತ್ತು ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,430ಕ್ಕೆ ಇಳಿಕೆ ಕಂಡಿದೆ. ಒಟ್ಟು 75 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಬೂಸ್ಟರ್ ಡೋಸ್‌ಗೆ ಕೊವಿನ್ ಆ್ಯಪ್‍ನಲ್ಲಿ ಮತ್ತೆ ನೋಂದಾಯಿಸುವ ಅಗತ್ಯವಿಲ್ಲ – ಆರೋಗ್ಯ ಇಲಾಖೆ
ಈವರೆಗೆ ರಾಜ್ಯದಲ್ಲಿ ಒಟ್ಟು 39,45,946 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,04,417 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 60,864 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 9,796 ಸ್ಯಾಂಪಲ್ (ಆರ್‌ಟಿಪಿಸಿಆರ್ 7,533 + 2,263 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಚಂದ್ರು ಹತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್- ಘಟನೆಯ ಇಂಚಿಂಚು ಮಾಹಿತಿ ನೀಡಿದ ಸ್ನೇಹಿತ ಸೈಮನ್ ರಾಜ್
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 39, ದಾವಣಗೆರೆ 2, ಧಾರವಾಡ 4 ಮತ್ತು ತುಮಕೂರಿನಲ್ಲಿ 1 ಪಾಸಿಟಿವ್ ಪ್ರಕರಣ ದಾಖಲಾಗಿದೆ.