ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣದಲ್ಲಿ ಪ್ರತಿನಿತ್ಯ ಏರಿಳಿತ ಕಂಡು ಬರುತ್ತಿದೆ. ನಿನ್ನೆ 349 ಮಂದಿಯಲ್ಲಿ ಕೊರೊನಾ ವೈರಸ್ ಪತ್ತೆಯಾದರೆ ಇಂದು 462 ಮಂದಿಯಲ್ಲಿ ಪಾಸಿಟಿವ್ ಇರುವುದು ದೃಢಪಟ್ಟಿದೆ.
Advertisement
ಕೊರೊನಾ ಸಾವಿನ ಸಂಖ್ಯೆಯಲ್ಲಿ ಇಂದು ಇಳಿಕೆ ಕಂಡಿದ್ದು, ಇಂದು 9 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಇಂದು 253 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಇರುವುದು ಗೊತ್ತಾಗಿದೆ. 263 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, 6 ಮಂದಿ ಮೃತಪಟ್ಟಿರುವುದು ವರದಿಯಾಗಿದೆ. ಇದನ್ನೂ ಓದಿ: ವಿಚ್ಛೇದನ ಪಡೆದ ಬೆನ್ನಲ್ಲೇ ಆಶ್ರಮಕ್ಕೆ ಹೋಗಿದ್ದಾರಾ ಸಮಂತಾ?
Advertisement
Advertisement
ರಾಜ್ಯದಲ್ಲಿ 479 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 9,074 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,84,484 ಮಂದಿಗೆ ಕೊರೊನಾ ಬಂದಿದೆ. 29,37,405 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.1.94 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.39 ರಷ್ಟಿದೆ.
Advertisement
ಇಂದು ರಾಜ್ಯದಲ್ಲಿ ಇಂದು ಒಟ್ಟು 1,62,668 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 116121 ಸ್ಯಾಂಪಲ್ (RTPCR 97,948 + 18,173 RAPID Antigen)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಇಂದು ಒಟ್ಟು 4 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಬಾಗಲಕೋಟೆ 0, ಬಳ್ಳಾರಿ 2, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 6, ಬೆಂಗಳೂರು ನಗರ 253, ಬೀದರ್ 1, ಚಾಮರಾಜನಗರ 5, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 4, ಚಿತ್ರದುರ್ಗ 1, ದಕ್ಷಿಣ ಕನ್ನಡ 29, ದಾವಣಗೆರೆ 1, ಧಾರವಾಡ 2, ಗದಗ 0, ಹಾಸನ 19, ಹಾವೇರಿ 0, ಕಲಬುರಗಿ 2, ಕೊಡಗು 12, ಕೋಲಾರ 4, ಕೊಪ್ಪಳ 1, ಮಂಡ್ಯ 10, ಮೈಸೂರು 43, ರಾಯಚೂರು 0, ರಾಮನಗರ 1, ಶಿವಮೊಗ್ಗ 9, ತುಮಕೂರು 32, ಉಡುಪಿ 15, ಉತ್ತರ ಕನ್ನಡ 1, ವಿಜಯಪುರ 1 ಮತ್ತು ಯಾದಗಿರಿಯಲ್ಲಿ 1 ಪ್ರಕರಣ ದಾಖಲಾಗಿದೆ.
ಇಂದಿನ 20/10/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/JZEJVq9BQV @cmofKarnataka @mla_sudhakar @Randeep_Dev @HubballiRailway@KodaguConnect @IChangeMyCity@WeAreBangalore @bangalore@Belagavi_infra @PIBBengaluru @KarnatakaVarthe pic.twitter.com/qWB1neI2QQ
— K'taka Health Dept (@DHFWKA) October 20, 2021